ಆಸೀಸ್ ವಿರುದ್ಧದ ಏಕದಿನ ಸರಣಿ: 2 ಪಂದ್ಯಕ್ಕೆ ಕೆ.ಎಲ್. ರಾಹುಲ್ ನಾಯಕ: ತಂಡಕ್ಕೆ ಮರಳಿದ ಆರ್. ಅಶ್ವಿನ್

ನವದೆಹಲಿ: ಸೆಪ್ಟೆಂಬರ್ 22 ರಿಂದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ – ಆಸ್ಟ್ರೇಲಿಯಾ ಸಜ್ಜಾಗಿವೆ. ಎರಡೂ ತಂಡಗಳು ಏಕದಿನ ವಿಶ್ವಕಪ್ ಸ್ಪರ್ಧಿಗಳಾಗಿರುವುದರಿಂದ ಉಭಯ ತಂಡಗಳ ನಡುವೆ ಇದು ಆಕರ್ಷಕ ಸ್ಪರ್ಧೆಯಾಗಿದೆ.

ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ 2 ಪಂದ್ಯಗಳಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಆರ್. ಅಶ್ವಿನ್ ಜನವರಿ 2022 ರ ನಂತರ ಭಾರತ ತಂಡಕ್ಕೆ ಮರಳಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶುಕ್ರವಾರ ಮೊಹಾಲಿಯಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ಎರಡು ತಂಡಗಳನ್ನು ಘೋಷಿಸಿದೆ. ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

KL ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಅನುಭವಿ ಸ್ಪಿನ್ನರ್ ಅಶ್ವಿನ್ ಜನವರಿ 2022 ರ ನಂತರ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ. ರುತುರಾಜ್ ಗಾಯಕ್‌ವಾಡ್ ಮಾತ್ರ ತಂಡದಲ್ಲಿ ಹೊಸದಾಗಿ ಸೇರ್ಪಡೆಗೊಂಡವರು.

ಟೀಂ ಇಂಡಿಯಾ ತಂಡ(ಮೊದಲ ಎರಡು ಏಕದಿನ ಪಂದ್ಯಗಳಿಗೆ): ಕೆಎಲ್ ರಾಹುಲ್ (ಸಿ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ (ವಿಸಿ), ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮ , ಪ್ರಸಿದ್ಧ್ ಕೃಷ್ಣ, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್.

ಟೀಂ ಇಂಡಿಯಾ ತಂಡ(ಮೂರನೇ ಏಕದಿನ ಪಂದ್ಯಕ್ಕೆ): ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ವಿಸಿ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್ (*ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ) ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read