ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಧ್ವಜಾರೋಹಣ ಮಾಡದ ಮುಖ್ಯ ಶಿಕ್ಷಕಿ ಅಮಾನತು

ಶಿವಮೊಗ್ಗ: ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗಿದೆ.  ಶಾಲೆ, ಕಾಲೇಜು, ಕಚೇರಿ, ಖಾಸಗಿ ಕಚೇರಿ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ.

ಆದರೆ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಎಳನೀರುಕೊಪ್ಪದ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ನಿರ್ಲಕ್ಷ ವಹಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಸ್ವಾತಂತ್ರ್ಯ ದಿನದ ಮಹತ್ವ, ಸ್ವಾತಂತ್ರ್ಯ ಹೋರಾಟ, ಮಹನೀಯರ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಡದೆ ನಿರ್ಲಕ್ಷ ವಹಿಸಲಾಗಿದೆ.

ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲ್ಲ, ಧ್ವಜಾರೋಹಣ ಕೂಡ ಮಾಡಿಲ್ಲ. ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಕೂಡ ಬಂದಿಲ್ಲ. ಈ ಬಗ್ಗೆ ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಗ್ರಾಮಕ್ಕೆ ತೆರಳಿದ ಶಿಕ್ಷಣಾಧಿಕಾರಿ ಪರಿಶೀಲನೆ ನಡೆಸಿದ್ದು, ಶಿಕ್ಷಕಿಗೆ ಮಾಹಿತಿ ಕೇಳಿದಾಗ ಶಾಲೆಯ ದ್ವಜಸ್ಥಂಭ ಶಿಥಿಲವಾಗಿದೆ. ಹೀಗಾಗಿ ಧ್ವಜಾರೋಹಣ ಮಾಡಿಲ್ಲ. ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲ್ಲ ಎಂದು ತಿಳಿಸಿದ್ದಾರೆ.

ಆದರೆ ಶೀಕ್ಷಣಾಧಿಕಾರಿ ಶಾಲೆಗೆ ಹೋಗಿ ಪರಿಶೀಲಿಸಿದಾ ಧ್ವಸ್ತಂಭ ಗಟ್ಟಿಮುಟ್ಟಾಗಿ ಧ್ವಜಾರೋಹಣಕ್ಕೆ ಯೋಗ್ಯವಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣಾಧಿಕಾರಿಗಳು ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಅವರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read