ಕೊಡಗಿನಲ್ಲಿ ‘ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮ : ಧ್ವಜಾರೋಹಣ ನೆರವೇರಿಸಿದ ಸಚಿವ ಭೋಸರಾಜು

ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಲಾಯಿತು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.ಪ್ರಸ್ತುತ ಸರ್ಕಾರದ ಸಾಧನೆ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದಿರುವ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಕಿರುಹೊತ್ತಿಗೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read