ಸ್ವಾತಂತ್ರ್ಯ ದಿನಾಚರಣೆ; ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದು

ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದುಗೊಳಿಸಲಾಗಿದೆ.

ಆಗಸ್ಟ್ 15ರ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯದಲ್ಲಿ ವಾರದ ರಜೆ ರದ್ದು ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಮೃಗಾಲಯದ ಸಿಬ್ಬಂದಿಗಳಿಗೆ ವಾರದ ರಜೆ ರದ್ದು ಮಾಡಲಾಗಿದೆ.

ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರಲಿದೆ. ಸಾಮಾನ್ಯವಾಗಿ ಚಾಮರಾಜೇಂದ್ರ ಮೃಗಾಲಯಕ್ಕೆ ಪ್ರತಿ ಮಂಗಳವಾರ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಬಂದಿರುವುದರಿಂದ ವಾರದ ರಜೆ ರದ್ದು ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read