Independence Day: ಕೆಂಪುಕೋಟೆಯಲ್ಲಿ ಸತತ 10 ನೇ ಬಾರಿ `ಧ್ವಜಾರೋಹಣ’ ನೆರವೇರಿಸಿದ ಪ್ರಧಾನಿ ಮೋದಿ

 

ನವದೆಹಲಿ : ಇಂದು ದೇಶಾದ್ಯಂತ ಸಂಭ್ರಮದಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ 10ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸ್ಮಾರಕ ರೆಡ್ ಫೋರ್ಟ್ನಲ್ಲಿ 10 ಬಾರಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ ಎಂಬ ದಾಖಲೆ ಬರೆದಿದ್ದಾರೆ.

ರಾಷ್ಟ್ರವು ಇಂದು 77ನೇ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಿದ್ದು, ಈ ಅಮೃತ ಘಳಿಗೆಯಲ್ಲಿ ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣಕ್ಕೂ ಮುನ್ನ ರಾಜ್ಘಾಟ್ಗೆ ತೆರಳಿದ ಪ್ರಧಾನಿ ಮೋದಿ, ಗಾಂಧಿ ಸಮಾಧಿಗೆ ಗೌರವ ಸಮರ್ಪಣೆ ಮಾಡಿದರು. ಕೆಂಪುಕೋಟೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಸ್ವಾತಂತ್ರ್ಯ ಸಂಭ್ರಮದ ಆಚರಣೆ ನಡೆಯುತ್ತಿದೆ.

ರಾಜ್ಘಾಟ್ನಿಂದ ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿ ಗೌರವ ರಕ್ಷೆಯನ್ನು ಸ್ವೀಕರಿಸಿದರು. ಮೂರು ರಕ್ಷಣಾ ಪಡೆ ಹಾಗೂ ಪೊಲೀಸ್ ತಂಡದಿಂದ ಮೋದಿ ಅವರಿಗೆ ಗೌರವ ಸಲ್ಲಿಸಲಾಯಿತು.77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇದು ಅವರ ಸತತ 10 ನೇ ಬಾರಿಗೆ ಸ್ವಾತಂತ್ರ್ಯೋತ್ಸವದ ಭಾಷಣವಾಗಿದೆ.

https://twitter.com/ANI/status/1691266615072202752

https://twitter.com/ANI/status/1691264158359298048

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read