ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಇಂದು ಎರಡನೇ ಸೆಮಿ ಫೈನಲ್ ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ

ಇಂದು ವರ್ಲ್ಡ್ ಚಾಂಪಿಯನ್ ಆಫ್ ಲೆಜೆಂಡ್ಸ್ ನ ಸೆಮಿ ಫೈನಲ್ ಪಂದ್ಯಗಳು ನಡೆಯುತ್ತಿದ್ದು, ಮೊದಲ ಸೆಮಿ ಫೈನಲ್ ಅಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ಮುಖಾಮುಖಿಯಾದರೆ ಮತ್ತೊಂದು ಸೆಮಿ ಫೈನಲ್  ನಲ್ಲಿ  ಭಾರತ ಹಾಗೂ ಆಸ್ಟ್ರೇಲಿಯಾ ಸೆಣಸಾಡಲಿವೆ ಇಂದು ಗೆದ್ದ ತಂಡಗಳು ನಾಳೆ  ನಡೆಯಲಿರುವ ಫೈನಲ್ ಪಂದ್ಯದಲ್ಲಿ  ಮುಖಮುಖಿಯಾಗುತ್ತಿವೆ.

ಯೂಸಫ್ ಪಠಾಣ್, ಹರ್ಭಜನ್ ಸಿಂಗ್ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ ಭರ್ಜರಿ ಫಾರ್ಮ್ ನಲ್ಲಿದ್ದು, ಭಾರತ ತಂಡಕ್ಕೆ  ಬೆನ್ನೆಲುಬಾಗಿ ನಿಂತಿದ್ದಾರೆ. ಟಿ ಟ್ವೆಂಟಿ ವಿಶ್ವ ಕಪ್ನಲ್ಲಿ ಆರು ಎಸೆತಗಳಿಗೆ ಆರು ಸಿಕ್ಸರ್ ಬಾರಿಸಿದ್ದ ಯುವರಾಜ್ ಸಿಂಗ್ ಅವರಿಂದ ಒಂದು ಪಂದ್ಯದಲ್ಲೂ ಉತ್ತಮ ಪ್ರದರ್ಶನ ದೊರೆಯದೆ ಇರುವುದು ಅವರ ಅಭಿಮಾನಿಗಳಲ್ಲಿ ಬೇಸರ ತಂದಿದೆ. ಇಂದು ಆಸ್ಟ್ರೇಲಿಯಾ ಚಾಂಪಿಯನ್ಸ್ ಎದುರು ಭಾರತ ಚಾಂಪಿಯನ್ಸ್ ತಂಡ ಜಯಬೇರಿಯಾಗಲಿದೆಯಾ ಕಾದುನೋಡಬೇಕಾಗಿದೆ. ಭಾರತೀಯ ಕಾಲಮಾನ ರಾತ್ರಿ ಒಂಬತ್ತು ಗಂಟೆಗೆ ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ಈ ಪಂದ್ಯ ಪ್ರಸಾರವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read