ನವದೆಹಲಿ: ಮಾಲ್ಡೀವ್ಸ್‌ನ ಅತ್ಯಂತ ವಿಶ್ವಾಸಾರ್ಹ ಸ್ನೇಹಿತನಾಗಲು ಭಾರತ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶುಕ್ರವಾರ ದ್ವೀಪ ರಾಷ್ಟ್ರಕ್ಕೆ 4,850 ಕೋಟಿ ರೂ.ಗಳ ಸಾಲವನ್ನು ಘೋಷಿಸಿದ ಮೋದಿ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ವ್ಯಾಪಾರ, ರಕ್ಷಣೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಹಕಾರವನ್ನು ಕ್ರೋಢೀಕರಿಸಿದ್ದಾರೆ. ಪ್ರಧಾನಿಯವರ ಭೇಟಿಯು ಭಾರತ-ಮಾಲ್ಡೀವ್ಸ್ ಸಂಬಂಧಗಳಲ್ಲಿ ಪ್ರಮುಖ ತಿರುವು ನೀಡಿದೆ.
ದ್ವಿಪಕ್ಷೀಯ ಹೂಡಿಕೆ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಎರಡೂ ದೇಶಗಳು ಕೆಲಸ ಮಾಡುತ್ತವೆ ಮತ್ತು ಮುಕ್ತ ವ್ಯಾಪಾರ ಒಪ್ಪಂದಕ್ಕಾಗಿ ಮಾತುಕತೆಗಳು ಈಗಾಗಲೇ ಪ್ರಾರಂಭವಾಗಿವೆ ಎಂದು ಮೋದಿ ಘೋಷಿಸಿದರು.
ಮಾಲ್ಡೀವ್ಸ್‌ಗೆ 565 ಮಿಲಿಯನ್ ಅಮೆರಿಕನ್ ಡಾಲರ್ (4,850 ಕೋಟಿ ರೂ.) ಸಾಲ ನೀಡಲು ಭಾರತ ನಿರ್ಧರಿಸಿದೆ ಎಂದು ಮೋದಿ ಹೇಳಿದ್ದಾರೆ.
ರಕ್ಷಣೆ ಮತ್ತು ಭದ್ರತಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರವು ಪರಸ್ಪರ ನಂಬಿಕೆಗೆ ಸಾಕ್ಷಿಯಾಗಿದೆ. ಮಾಲ್ಡೀವ್ಸ್ ತನ್ನ ರಕ್ಷಣಾ ಸಾಮರ್ಥ್ಯಗಳನ್ನು ಬಲಪಡಿಸಲು ಭಾರತ ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.