ನವದೆಹಲಿ: ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿರುವ ದೆಹಲಿ ಪೊಲೀಸರು ಭಾರತ ಹಾಗೂ ಬಾಂಗ್ಲಾ ಗಡಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಓರ್ವನನ್ನು ಬಂಧಿಸಿದ್ದಾರೆ.
ದೆಹಲಿ ಪೊಲೀಸ್ ವಿಶೇಶ ಪಡೆಯಿಂದ ಉಗ್ರ ಶಬ್ಬೀರ್ ನನ್ನು ಬಂಧಿಸಲಾಗಿದೆ. ಈತ ಪಾಕಿಸ್ತಾನದ ಐಎಸ್ ಐ ಜೊತೆ ನಂಟು ಹೊಂದಿದ್ದ ಎಂದು ತಿಳಿದುಬಂದಿದೆ. ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದ.
ಗಡಿಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯ ವೇಳೆ ಶಬ್ಬೀರ್ ನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

