HomeLatest Newsವಿರಾಟ್ ಕೊಹ್ಲಿ ಭರ್ಜರಿ ಶತಕ: ಬಾಂಗ್ಲಾ ಬಗ್ಗು ಬಡಿದ ಭಾರತ

ವಿರಾಟ್ ಕೊಹ್ಲಿ ಭರ್ಜರಿ ಶತಕ: ಬಾಂಗ್ಲಾ ಬಗ್ಗು ಬಡಿದ ಭಾರತ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ತಾಂಜಿದ್ ಹಸನ್ 51, ಲಿಟ್ಟನ್ ದಾಸ್ 66, ಮುಷಫೀರ್ ರಹೀಂ 38, ಮಹಮ್ಮದ್ ಉಲ್ಲಾ 46 ರನ್ ಗಳಿಸಿದರು. ಭಾರತದ ಪರ ಬೂಮ್ರಾ 2, ಮೊಹಮ್ಮದ್ ಸಿರಾಜ್ 2, ರವೀಂದ್ರ ಜಡೇಜ 2 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೆಲುವಿನ ಗುರಿ ಬೆನ್ನತ್ತಿದ ಭಾರತ ವಿರಾಟ್ ಕೊಹ್ಲಿ ಶತಕದ ನೆರವಿನಿಂದ 41.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ ಗಳಿಸಿತು. ರೋಹಿತ್ ಶರ್ಮಾ 48, ಶುಭಮನ್ ಗಿಲ್ 53, ವಿರಾಟ್ ಕೊಹ್ಲಿ ಅಜೇಯ 103, ಶ್ರೇಯಸ್ ಅಯ್ಯರ್ 19, ಕೆಎಲ್ ರಾಹುಲ್ ಅಜೇಯ 34 ರನ್ ಗಳಿಸಿದರು. ಮೆಹಂದಿ ಹಸನ್ 2, ಹಸನ್ ಮಹಮ್ಮದ್ 1 ವಿಕೆಟ್ ಪಡೆದರು. ಇದರೊಂದಿಗೆ ಭಾರತದ ವಿಶ್ವಕಪ್ ನಲ್ಲಿ ಸತತ 4 ಪಂದ್ಯ ಜಯಿಸಿದೆ. ಅ. 22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular