HomeLatest NewsBIG BREAKING: 302 ರನ್ ಗಳಿಂದ ಹೀನಾಯವಾಗಿ ಸೋತ ಶ್ರೀಲಂಕಾ: ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ...

BIG BREAKING: 302 ರನ್ ಗಳಿಂದ ಹೀನಾಯವಾಗಿ ಸೋತ ಶ್ರೀಲಂಕಾ: ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಭಾರತ ಅಜೇಯ ಓಟ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವ ಕಪ್ ಟೂರ್ನಿಯ ಪಂದ್ಯದಲ್ಲಿ ಶ್ರೀಲಂಕಾ ಹೀನಾಯ ಸೋಲು ಕಂಡಿದೆ. ಭಾರತ 302 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ ಮತ್ತೊಂದು ಭರ್ಜರಿ ಗೆಲುವು ಸಾಧಿಸಿದ್ದು, ಪ್ರಸಕ್ತ ಟೂರ್ನಿಯಲ್ಲಿ ಅಜೇಯ ತಂಡವಾಗಿ ಮುಂದುವರೆದಿದೆ. ವಿಶ್ವಕಪ್ ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು. ರೋಹಿತ್ ಶರ್ಮಾ 4, ಶುಭಮನ್ ಗಿಲ್ 92, ವಿರಾಟ್ ಕೊಹ್ಲಿ 88, ಶ್ರೇಯಸ್ ಅಯ್ಯರ್ 82, ಕೆ.ಎಲ್. ರಾಹುಲ್ 21, ಸೂರ್ಯಕುಮಾರ್ ಯಾದವ್ 12, ರವೀಂದ್ರ ಜಡೇಜ 35 ರನ್ ಗಳಿಸಿದರು. ಶ್ರೀಲಂಕಾ ಪರವಾಗಿ ದಿಲ್ಸನ್ ಮಧುಶಂಕ 5 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೃಹತ್ ಗೆಲುವಿನ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ ಹೀನಾಯ ಸೋಲು ಕಂಡಿದೆ. 19.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 55 ರನ್ ಗಳಿಸಿತು.

ಲಂಕಾ ಪರವಾಗಿ ಏಂಜೆಲೋ ಮ್ಯಾಥ್ಯೂಸ್ 12, ಮಹೇಶ್ ತೀಕ್ಷ್ಣ 12, ಕಸುನ್ ರಜಿತ 14 ರನ್ ಗಳಿಸಿದರು. ಮೊಹಮ್ಮದ್ ಶಮಿ 5, ಮೊಹಮದ್ ಸಿರಾಜ್ 3 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular