HomeLatest NewsBREAKING: ಭಾರತಕ್ಕೆ ದಾಖಲೆಯ 317 ರನ್ ಭರ್ಜರಿ ಜಯ: ಮೊಹಮ್ಮದ್ ಸಿರಾಜ್ ಮಾರಕ ದಾಳಿ: ಕೊಹ್ಲಿ,...

BREAKING: ಭಾರತಕ್ಕೆ ದಾಖಲೆಯ 317 ರನ್ ಭರ್ಜರಿ ಜಯ: ಮೊಹಮ್ಮದ್ ಸಿರಾಜ್ ಮಾರಕ ದಾಳಿ: ಕೊಹ್ಲಿ, ಗಿಲ್ ಭರ್ಜರಿ ಶತಕ: ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಕ್ಲೀನ್ ಸ್ವೀಪ್

ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಭಾರತ 317 ರನ್ ಭರ್ಜರಿ ಜಯ ಗಳಿಸಿದೆ.

ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಭರ್ಜರಿ ಶತಕ, ಮೊಹಮ್ಮದ್ ಸಿರಾಜ್(4 ವಿಕೆಟ್) ಮಾರಕ ಬೌಲಿಂಗ್ ನೆರವಿನಿಂದ ಭಾರತ 3 ಪಂದ್ಯಗಳ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರವಾಗಿ ರೋಹಿತ್ ಶರ್ಮಾ 42, ಶುಭಮನ್ ಗಿಲ್ 116, ವಿರಾಟ್ ಕೊಹ್ಲಿ ಅಜೇಯ 166, ಶ್ರೇಯಸ್ ಅಯ್ಯರ್ 38, ಕೆ.ಎಲ್. ರಾಹುಲ್ 7, ಸೂರ್ಯ ಕುಮಾರ್ ಯಾದವ್ 4, ಹಾಗೂ ಅಕ್ಷರ್ ಪಟೇಲ್ ಅಜೇಯ 2 ರನ್ ಗಳಿಸಿದರು. ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಕಲೆಹಾಕಿತು. ಲಂಕಾ ಪರವಾಗಿ ಕಸುನ್ ರಜಿತ 2, ಲಾಹಿರು ಕುಮಾರ 2, ಚಾಮಿಕ ಕರುಣರತ್ನ 1 ವಿಕೆಟ್ ಪಡೆದರು.

ಬೃಹತ್ ಮೊತ್ತದ ಗೆಲುವಿನ ಗುರಿ ಬೆನ್ನತ್ತಿದ ಶ್ರೀಲಂಕಾ ಮೊಹಮ್ಮದ್ ಸಿರಾಜ್ ದಾಳಿಗೆ ತತ್ತರಿಸಿತು, 22 ಓವರ್ ಗಳಿಗೆ 73 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಶ್ರೀಲಂಕಾ ಪರವಾಗಿ ನುವನಿದು ಫೆರ್ನಾಂಡೊ 19, ದಾಸನ್ ಶನಕ 11 ರನ್, ಕಸುನ್ ರಜಿತ 13 ಗಳಿಸಿದರು. ಮೊಹಮ್ಮದ್ ಸಿರಾಜ್ 4, ಮೊಹಮದ್ ಶಮಿ 2, ಕುಲದೀಪ್ ಯಾದವ್ 2 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular