HomeLatest Newsಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತ 150+ ಚೇಸ್ ಮಾಡಿದ್ದು ಕೇವಲ 3 ಬಾರಿ; ಎಲ್ಲ ಪಂದ್ಯದಲ್ಲೂ...

ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತ 150+ ಚೇಸ್ ಮಾಡಿದ್ದು ಕೇವಲ 3 ಬಾರಿ; ಎಲ್ಲ ಪಂದ್ಯದಲ್ಲೂ ಔಟ್ ಆಗದೇ ಗೆಲ್ಲಿಸಿದ್ದು ಒಬ್ಬನೇ ಅವನೊಬ್ಬನೇ!

ನಿನ್ನೆ ( ಫೆಬ್ರವರಿ 22 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಹಂತದ ತನ್ನ ಮೊದಲ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಹೀನಾಯ ಸೋಲನ್ನು ಕಂಡು ಭಾರೀ ಮುಖಭಂಗ ಅನುಭವಿಸಿತು.

ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆರಿಸಿಕೊಂಡು 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ 188 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಭಾರತ 18.4 ಓವರ್‌ಗಳಲ್ಲಿ 111 ರನ್ ಕಲೆಹಾಕಿ ಆಲ್‌ಔಟ್ ಆಯಿತು.

ಈ ಮೂಲಕ ಭಾರತ ಮತ್ತೊಮ್ಮೆ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ 150+ ರನ್ ಚೇಸ್ ಮಾಡಲಾಗದೇ ಸೋಲನ್ನು ಒಪ್ಪಿಕೊಂಡಿತು. ಹೀಗೆ ಭಾರತ ಸೋಲುತ್ತಿದ್ದಂತೆ ಈ ಹಿಂದೆ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಭಾರತ ಯಶಸ್ವಿಯಾಗಿ 150+ ರನ್ ಗುರಿಯನ್ನು ಬೆನ್ನಟ್ಟಿದ್ದು ಯಾವಾಗ ಎಂಬ ಅಂಕಿಅಂಶಗಳು ವೈರಲ್ ಆಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ 3 ಬಾರಿ 150+ ರನ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದೆ. ಆ ಎಲ್ಲ ಪಂದ್ಯಗಳಲ್ಲೂ ಚೇಸ್ ಮಾಸ್ಟರ್, ದ ಕಿಂಗ್ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸದೇ ಎಲ್ಲ ಪಂದ್ಯಗಳಲ್ಲೂ ಅರ್ಧಶತಕ ಬಾರಿಸಿ ಪಂದ್ಯವನ್ನು ಗೆಲ್ಲಿಸಿದ್ದಾರೆ. ಆ ಪಂದ್ಯಗಳ ಮಾಹಿತಿ ಮುಂದಿದೆ.

2014ರ ಸೆಮಿಫೈನಲ್ ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ ಭಾರತಕ್ಕೆ 173 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಭಾರತ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತ್ತು. ವಿರಾಟ್ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಿ 44 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 72 ರನ್ ಚಚ್ಚಿದರು.

2016ರ ಸೂಪರ್ 10 ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಕಲೆಹಾಕಿ ಭಾರತಕ್ಕೆ 161 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಬಾರಿಸಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 51 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 82 ರನ್ ಬಾರಿಸಿದ್ದರು.

2022ರ ಸೂಪರ್ 12 ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿ ಭಾರತಕ್ಕೆ 160 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ್ದ ಭಾರತ ಕೇವಲ 31 ರನ್‌ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಬಹುತೇಕರು ಭಾರತಕ್ಕೆ ಸೋಲು ಖಚಿತ ಎಂದು ಭವಿಷ್ಯ ನುಡಿದಿದ್ದರು. ಆದರೆ ಕಣದಲ್ಲಿದ್ದ ಚೇಸ್ ಮಾಸ್ಟರ್ ಕೊಹ್ಲಿ ವಿನ್ ಪ್ರೆಡಿಕ್ಟರ್‌ ಉಲ್ಟಾ ಮಾಡಿದ್ದರು. ತಂಡ ಕುಸಿತ ಕಂಡರೂ ನೆಲಕಚ್ಚಿ ನಿಂತ ಕೊಹ್ಲಿ 53 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 82 ರನ್ ಚಚ್ಚಿದ್ದರು.

ಹೀಗೆ ಈ ಎಲ್ಲ ಪಂದ್ಯದಲ್ಲಿ ಕೊಹ್ಲಿ ಅಜೇಯರಾಗಿ ಉಳಿದುಕೊಂಡಿದ್ದು ಮಾತ್ರವಲ್ಲದೇ ತಮ್ಮ ಏಕಾಂಗಿ ಹೋರಾಟದ ಫಲವಾಗಿ ಎಲ್ಲ ಪಂದ್ಯದಲ್ಲೂ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಸಹ ಭಾಜನರಾಗಿದ್ದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular