HomeLatest Newsಆಕ್ಲೆಂಡ್‌ನಲ್ಲಿ ಭಾರತಕ್ಕೆ ಕಹಿ ನೆನಪು: ಟಿ20 ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ದಾಖಲೆಯ ಅಂತರದ ಸೋಲು!

ಆಕ್ಲೆಂಡ್‌ನಲ್ಲಿ ಭಾರತಕ್ಕೆ ಕಹಿ ನೆನಪು: ಟಿ20 ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ದಾಖಲೆಯ ಅಂತರದ ಸೋಲು!

ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ಶುಕ್ರವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ 87 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಅನುಭವಿಸಿದ ಅತಿ ದೊಡ್ಡ ಸೋಲು ಇದಾಗಿದೆ. ಈ ಹಿಂದೆ 2019 ರಲ್ಲಿ ಕಿವೀಸ್ ಪಡೆ ಭಾರತದ ವಿರುದ್ಧ 80 ರನ್‌ಗಳಿಂದ ಗೆದ್ದಿದ್ದೇ ಗರಿಷ್ಠ ಅಂತರದ ಗೆಲುವಾಗಿತ್ತು. ಇದೀಗ ಆ ದಾಖಲೆಯನ್ನು ಕಿವೀಸ್ ಪಡೆ ಮುರಿದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ, ಗ್ಲೆನ್ ಫಿಲಿಪ್ಸ್ ಅವರ ಸ್ಫೋಟಕ ಶತಕ ಹಾಗೂ ಮೈಕಲ್ ಬ್ರೇಸ್‌ವೆಲ್ ಅವರ ಬಿರುಗಾಳಿ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 259 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಗ್ಲೆನ್ ಫಿಲಿಪ್ಸ್ ಕೇವಲ 49 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 6 ಬೌಂಡರಿಗಳ ನೆರವಿನಿಂದ 107 ರನ್ ಬಾರಿಸಿದರೆ, ಬ್ರೇಸ್‌ವೆಲ್ 25 ಎಸೆತಗಳಲ್ಲಿ 65 ರನ್ ಚಚ್ಚಿದರು. ಆರಂಭದಲ್ಲಿ ಭಾರತದ ಪರ ಮಯಾಂಕ್ ಯಾದವ್ ವಿಕೆಟ್ ಕಬಳಿಸಿ ಉತ್ತಮ ಆರಂಭ ನೀಡಿದರೂ, ಫಿಲಿಪ್ಸ್ ಮತ್ತು ಬ್ರೇಸ್‌ವೆಲ್ ಜುಗಲ್ಬಂದಿ ಭಾರತೀಯ ಬೌಲರ್‌ಗಳನ್ನು ದೂಳೀಪಟ ಮಾಡಿತು.

ಬೃಹತ್ ಗುರಿ ಬೆನ್ನತ್ತಿದ ಶ್ರೇಯಸ್ ಐಯ್ಯರ್ ನಾಯಕತ್ವದ ಭಾರತೀಯ ಬ್ಯಾಟಿಂಗ್ ಪಡೆ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನ್ಯೂಜಿಲೆಂಡ್ ವೇಗಿ ಜೇಕಬ್ ಡಫಿ ತಮ್ಮ ಮಾರಕ ಬೌಲಿಂಗ್ ದಾಳಿಯಿಂದ 4 ವಿಕೆಟ್ ಕಬಳಿಸಿ ಭಾರತದ ಬೆನ್ನೆಲುಬು ಮುರಿದರು. ಅಂತಿಮವಾಗಿ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 172 ರನ್‌ಗಳಷ್ಟೇ ಕಲೆಹಾಕಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular