BREAKING : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಹೆಸರು ಫೈನಲ್ : ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಬೆಂಗಳೂರು : ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಹೆಸರು ಫೈನಲ್ ಆಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.

ಮೈತ್ರಿಕೂಟದ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘INDIA’ ಹೆಸರು ನಾಮಕರಣ ಆಗಿದೆ ಎಂದು ಹೇಳಿದ್ದಾರೆ.

‘INDIA’ ವಿಸ್ಕ್ರತ ರೂಪ

I – Indian

N – National

D – Democractic

I – Inclusive

A – Alliance

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಿದ್ದ ವಿಪಕ್ಷಗಳ ಸಭೆಯಲ್ಲಿ 26 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಶಿವಸೇನೆಯ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಸಭೆಯಲ್ಲಿ ಲೋಕಸಭಾ ಚುನವಣೆಯಲ್ಲಿ ಒಗ್ಗಟ್ಟಿನ ಬಗ್ಗೆ 26 ಪಕ್ಷಗಳ ಸಾಮೂಹಿಕ ಹೋರಾಟ ಸಂಕಲ್ಪ ಮಾಡಲಾಗಿದೆ. ಧ್ವೇಷ ರಾಜಕಾರಣದ ವಿರುದ್ಧ ಹೋರಾಟಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಲಾಗಿದೆ. ಭಾರತ ರಕ್ಷಿಸಿ ಬಿಜೆಪಿ ಸೋಲಿಸುವ ಬಗ್ಗೆ ಚರ್ಚೆಯಾಗಿದೆ. ಸೀಟು ಹಂಚಿಕೆ ವಿಚಾರವಾಗಿಯೂ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ ಸಭೆಯಲ್ಲಿ ಇಂದು ವಿವಿಧ ಪಕ್ಷದ ನಾಯಕರೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳು ಹಾಗೂ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read