HomeLive Newsಅಕ್ರಮವಾಗಿ ಭಾರತ ಪ್ರವೇಶಿಸಲು ಯತ್ನ: ಖಲಿಸ್ತಾನಿ ಉಗ್ರ ಸೇರಿ ಐವರು ಅರೆಸ್ಟ್

ಅಕ್ರಮವಾಗಿ ಭಾರತ ಪ್ರವೇಶಿಸಲು ಯತ್ನ: ಖಲಿಸ್ತಾನಿ ಉಗ್ರ ಸೇರಿ ಐವರು ಅರೆಸ್ಟ್

ನವದೆಹಲಿ: ಭಾರತ-ನೇಪಾಳ ಗಡಿಯಲ್ಲಿ ಭದ್ರತಾ ಪಡೆಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಲು ಯತ್ನಿಸುತ್ತಿದ್ದ ಅಮೆರಿಕದ ಪ್ರಜೆ ಹಾಗೂ ಖಲಿಸ್ತಾನ್ ಪರ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ವಾಂಟೆಡ್ ಉಗ್ರ ಸೇರಿದಂತೆ ಐವರನ್ನು ಬಂಧಿಸಿವೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ರುಪೈದಿಹಾ ಗಡಿ ಪೋಸ್ಟ್ ಬಳಿ ಸಶಸ್ತ್ರ ಸೀಮಾ ಬಲ್ (SSB) ಹಾಗೂ ಯುಪಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಐವರು ಶಂಕಿತರನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಕ್ರಮ್‌ಜಿತ್ ಸಿಂಗ್, ಮನ್ವೀರ್ ಸಿಂಗ್ ಧಿಲ್ಲೋನ್ ಹಾಗೂ ಇಬ್ಬರು ಅಕ್ರಮವಾಗಿ ಗಡಿ ದಾಟಲು ವಾಹನ ಹಾಗೂ ಮಾರ್ಗದರ್ಶನ ನೀಡಿದ ಸ್ಥಳೀಯರಾದ ಸುರೇಶ್ ಕುಮಾರ್ ಪಾಠಕ್, ದಿಲೀಪ್ ಉಪಾಧ್ಯಾಯ ಹಾಗೂ ಚಾಲಕ ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಕ್ರಮ್‌ಜಿತ್ ಸಿಂಗ್ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಸಕ್ರಿಯ ಸದಸ್ಯ. 2023 ರಲ್ಲಿ ಪಂಜಾಬ್‌ನ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ ಮುಖ್ಯ ವಾಂಟೆಡ್ ಅಪರಾಧಿಯಾಗಿದ್ದ.

ಮನ್ವೀರ್ ಸಿಂಗ್ ಧಿಲ್ಲೋನ್ ಪಂಜಾಬ್‌ನ ಮೋಗಾ ಜಿಲ್ಲೆಯ ಮೂಲದ ಅಮೆರಿಕನ್ ಪ್ರಜೆ. ಕಾನೂನು ಜಾರಿ ಸಂಸ್ಥೆಗಳ ಕಣ್ಣು ತಪ್ಪಿಸಲು ವೀಸಾ ಇಲ್ಲದೇ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ.

ಯಾವುದೇ ಪ್ರಮಾಣಪತ್ರ ಹಾಗೂ ದಾಖಲೆಗಳಿಲ್ಲದೆ ಗಡಿ ದಾಟುತ್ತಿದ್ದ ಇಬ್ಬರು ಮುಖ್ಯ ಆರೋಪಿಗಳು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇಬ್ಬರ ಮೇಲೆಯೂ ಪಂಜಾಬ್‌ನಲ್ಲಿ ಪ್ರತ್ಯೇಕ ಅಪರಾಧ ಪ್ರಕರಣಗಳಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದರು ಎಂದು ಬಹ್ರೈಚ್ ಪೊಲೀಸ್ ವರಿಷ್ಠಾಧಿಕಾರಿ ವಿಶ್ವಜೀತ್ ಶ್ರೀವಾಸ್ತವ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ರುಪೈದಿಹಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular