HomeLatest NewsBREAKING: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

BREAKING: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ -4 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ಆರಂಭವಾಗಿದೆ.

ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೋಹಿತ್ ಶರ್ಮಾ, ಶುಭ ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಆಡುವ 11 ಆಟಗಾರರಾಗಿದ್ದಾರೆ.

ಪಲ್ಲೇಕೆಲೆಯಲ್ಲಿ ನಡೆದ ಲೀಗ್ ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 266 ರನ್ ಗಳಿಸಿತ್ತು. ಮಳೆಯಿಂದಾಗಿ ಪಾಕಿಸ್ತಾನ ಬ್ಯಾಟಿಂಗ್ ಮಾಡಲು ಸಾಧ್ಯವಾಗದೆ ಪಂದ್ಯ ರದ್ದು ಮಾಡಲಾಗಿತ್ತು.

ಇಂದು ಸೂಪರ್ -4 ಹಂತದ ಪಂದ್ಯ ನಡೆದಿದ್ದು, ಮಳೆಯಿಂದಾಗಿ ಪಂದ್ಯ ರದ್ದುಗೊಂಡರೆ ಸೋಮವಾರ ಪಂದ್ಯ ನಡೆಯಲಿದೆ. ಇದಕ್ಕಾಗಿ ಮೀಸಲು ದಿನ ಕಾಯ್ದಿರಿಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ಏಕದಿನ ಕ್ರಿಕೆಟ್ ನಲ್ಲಿ ಇದುವರೆಗೆ 133 ಬಾರಿ ಮುಖಾಮುಖಿಯಾಗಿದ್ದು, ವಿಶ್ವಕಪ್ ಕ್ರಿಕೆಟ್ ನಲ್ಲಿ 7 ಬಾರಿ, ಏಷ್ಯಾ ಕಪ್ ನಲ್ಲಿ 14 ಸಲ ಮುಖಾಮುಖಿಯಾಗಿವೆ.

ಏಷ್ಯಾಕಪ್ ನಲ್ಲಿ ಭಾರತ 7 ಬಾರಿ ಚಾಂಪಿಯನ್ ಆಗಿದೆ. ಪಾಕಿಸ್ತಾನ ಎರಡು ಬಾರಿ ಪ್ರಶಸ್ತಿ ಗಳಿಸಿದೆ. ಒಟ್ಟು 133 ಏಕದಿನ ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನ ಮುಖಮುಖಿಯಾಗಿದ್ದು, ಭಾರತ 55 ಸಲ, ಪಾಕಿಸ್ತಾನ 73 ಬಾರಿ ಜಯಗಳಿಸಿದೆ. 5 ಪಂದ್ಯಗಳು ಡ್ರಾ ಆಗಿವೆ. ವಿಶ್ವಕಪ್ ನಲ್ಲಿ 7 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 7 ಪಂದ್ಯಗಳನ್ನು ಜಯಿಸಿದೆ. ಏಷ್ಯಾ ಕಪ್ ನಲ್ಲಿ 14 ಸಲ ಮುಖಾಮುಖಿಯಾಗಿದ್ದು, ಭಾರತ 7 ಪಾಕಿಸ್ತಾನ 5 ಪಂದ್ಯಗಳಲ್ಲಿ ಜಯಸಿವೆ. ಎರಡು ಪಂದ್ಯಗಳು ಡ್ರಾ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular