HomeLatest Newsಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಜ್ಜು

ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಜ್ಜು

ಕೊಲಂಬೊ: ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ -4 ಹಂತ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಲೀಗ್ ಹಂತದಲ್ಲಿ ನಡೆದ ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಪಲ್ಲೇಕೆಲೆಯಲ್ಲಿ ನಡೆದ ಲೀಗ್ ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 266 ರನ್ ಗಳಿಸಿತ್ತು. ಮಳೆಯಿಂದಾಗಿ ಪಾಕಿಸ್ತಾನ ಬ್ಯಾಟಿಂಗ್ ಮಾಡಲು ಸಾಧ್ಯವಾಗದೆ ಪಂದ್ಯ ರದ್ದು ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸೂಪರ್ -4 ಹಂತದ ಪಂದ್ಯ ನಡೆಯಲಿದ್ದು, ಭಾನುವಾರದ ಪಂದ್ಯ ಮಳೆಯಿಂದಾಗಿ ರದ್ದುಗೊಂಡರೆ ಸೋಮವಾರ ಪಂದ್ಯ ನಡೆಯಲಿದೆ. ಇದಕ್ಕಾಗಿ ಮೀಸಲು ದಿನ ಕಾಯ್ದಿರಸಲಾಗಿದೆ.

ಭಾರತ ಮತ್ತು ಪಾಕಿಸ್ತಾನ ಏಕದಿನ ಕ್ರಿಕೆಟ್ ನಲ್ಲಿ ಇದುವರೆಗೆ 133 ಬಾರಿ ಮುಖಾಮುಖಿಯಾಗಿದ್ದು, ವಿಶ್ವಕಪ್ ಕ್ರಿಕೆಟ್ ನಲ್ಲಿ 7 ಬಾರಿ, ಏಷ್ಯಾ ಕಪ್ ನಲ್ಲಿ 14 ಸಲ ಮುಖಾಮುಖಿಯಾಗಿವೆ.

ಏಷ್ಯಾಕಪ್ ನಲ್ಲಿ ಭಾರತ 7 ಬಾರಿ ಚಾಂಪಿಯನ್ ಆಗಿದೆ. ಪಾಕಿಸ್ತಾನ ಎರಡು ಬಾರಿ ಪ್ರಶಸ್ತಿ ಗಳಿಸಿದೆ. ಒಟ್ಟು 133 ಏಕದಿನ ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನ ಮುಖಮುಖಿಯಾಗಿದ್ದು, ಭಾರತ 55 ಸಲ, ಪಾಕಿಸ್ತಾನ 73 ಬಾರಿ ಜಯಗಳಿಸಿದೆ. 5 ಪಂದ್ಯಗಳು ಡ್ರಾ ಆಗಿವೆ. ವಿಶ್ವಕಪ್ ನಲ್ಲಿ 7 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 7 ಪಂದ್ಯಗಳನ್ನು ಜಯಿಸಿದೆ. ಏಷ್ಯಾ ಕಪ್ ನಲ್ಲಿ 14 ಸಲ ಮುಖಾಮುಖಿಯಾಗಿದ್ದು, ಭಾರತ 7 ಪಾಕಿಸ್ತಾನ 5 ಪಂದ್ಯಗಳಲ್ಲಿ ಜಯಸಿವೆ. ಎರಡು ಪಂದ್ಯಗಳು ಡ್ರಾ ಆಗಿದೆ.

ಇಂದಿನ ಪಂದ್ಯ ಗೆಲ್ಲುವ ಗುರಿಯೊಂದಿಗೆ ಭಾರತ ತಂಡ ಕೆಲವು ಬದಲಾವಣೆಗಳೊಂದಿಗೆ ಅಖಾಡಕ್ಕಿಳಿಯಲು ಸಜ್ಜಾಗಿದ್ದು, ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ. ಕೆ.ಎಲ್. ರಾಹುಲ್ ತಂಡಕ್ಕೆ ಮರಳಲಿದ್ದು, ಶ್ರೇಯಸ್ ಅಯ್ಯರ್  ಅಥವಾ ಇಶಾನ್ ಕಿಶಾನ್ ಹೊರಗೊಳಿಯಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular