ಶ್ರೀನಗರ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸೇರಿದಂತೆ ದೇಶದಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ಹೆಚ್ಚಿನ ಭದ್ರತೆಗೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.
ಜಮ್ಮು-ಕಾಶ್ಮೀರ ಸೇರಿದಂತೆ ಭಾರತದ ಗಡಿ ರಾಜ್ಯಗಳಲ್ಲಿ ಎಲ್ಲಾ ಅರೆಸೇನಾಪಡೆಗಳನ್ನು ಹೆಚ್ಚುವರಿ ಭದ್ರತೆಗಾಗಿ ನಿಯೋಜಿಸಲಾಗಿದೆ. ಸಿಆರ್ ಪಿಎಫ್, ಬಿಎಸ್ ಎಫ್, ಐಟಿಬಿಪಿ ಮತ್ತು ಎಸ್ ಎಸ್ ಬಿ ಪಡೆಗಳನ್ನು ನಿಯೋಜಿಸಲಾಗಿದೆ.
ಎಲ್ಲಾ ಅರೆಸೇನಾ ಪಡೆಗಳಿಂದ 137 ಕಂಪನಿಗಳನ್ನು ರವಾನಿಸಲಾಗಿದೆ. ಗಡಿಯಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ.