HomeLatest Newsಪಾಕಿಸ್ತಾನ ಬಗ್ಗು ಬಡಿದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ

ಪಾಕಿಸ್ತಾನ ಬಗ್ಗು ಬಡಿದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ.

ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸತತ 8ನೇ ಜಯ ದಾಖಲಿಸಿದೆ. ಈ ಟೂರ್ನಿಯ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ವಿಶ್ವಕಪ್ ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಟ್ರೇಲಿಯಾ, ಆಫ್ಘಾನಿಸ್ತಾನ, ಪಾಕಿಸ್ತಾನ ವಿರುದ್ಧ ಭರ್ಜರಿ ಜಯಗಳಿಸಿದ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು ನಿರಾಯಾಸವಾಗಿ ಸೆಮಿಫೈನಲ್ ಗೆ ಎಂಟ್ರಿ ಕೊಡುವ ಲೆಕ್ಕಾಚಾರದಲ್ಲಿದೆ. ಭಾರತದ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಪಾಕಿಸ್ತಾನ 42.5 ಓವರ್ ಗಳಲ್ಲಿ 191 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಗೆಲುವಿನ ಗುರಿ ಬೆನ್ನುತ್ತಿದ ಭಾರತ ತಂಡ 30.3 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular