HomeLatest Newsಪಾಕ್ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ: ಏಕದಿನದಲ್ಲಿ 300ನೇ ಸಿಕ್ಸರ್ ಸಿಡಿಸಿ ದಾಖಲೆ

ಪಾಕ್ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ: ಏಕದಿನದಲ್ಲಿ 300ನೇ ಸಿಕ್ಸರ್ ಸಿಡಿಸಿ ದಾಖಲೆ

ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿರುವ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅರ್ಧ ಶತಕ ಸಿಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭಾರತದ ಬೌಲರ್ ಗಳ ಸಂಘಟಿತ ದಾಳಿಗೆ ತತ್ತರಿಸಿ 42.5 ಓವರ್ ಗಳಲ್ಲಿ 191 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ಪರವಾಗಿ ಬಾಬರ್ ಆಜಂ 50, ಮಹಮ್ಮದ್ ರಿಜ್ವಾನ್ 49, ಇಮಾಮ್ ಉಲ್ ಹಕ್ 36 ರನ್ ಗಳಿಸಿದರು. ಭಾರತದ ಪರ ಬೂಮ್ರಾ, ಮಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ರವೀದ್ರ ಜಡೇಜ ತಲಾ 2 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೆಲುವಿನ ಗುರಿ ಬೆನ್ನತ್ತಿದ ಭಾರತದ ಪರ ರೋಹಿತ್ ಶರ್ಮಾ ಅಜೇಯ 60, ಶುಭಮನ್ ಗಿಲ್ 16, ವಿರಾಟ್ ಕೊಹ್ಲಿ 16, ಶ್ರೇಯಸ್ ಅಯ್ಯರ್ ಅಜೇಯ 15 ರನ್ ಗಳಿಸಿದ್ದಾರೆ. ಪಾಕ್ ಪರ ಶಾಹಿನ್ ಅಫ್ರಿದಿ 1, ಹಸನ್ ಅಲಿ 1 ವಿಕೆಟ್ ಪಡೆದರು. ಆಟ ಮುಂದುವರೆದಿದ್ದು, ಭಾರತ 14.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದೆ.

ರೋಹಿತ್ ಶರ್ಮಾ ದಾಖಲೆ:

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 300 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ಕಳೆದ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದರು.

ಅವರು ಏಕದಿನದಲ್ಲಿ 302, ಟೆಸ್ಟ್ ನಲ್ಲಿ 77, ಟಿ20ಯಲ್ಲಿ 182 ಸಿಕ್ಸರ್ ಸೇರಿ ಒಟ್ಟಾರೆ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 561 ಸಿಕ್ಸರ್ ಸಿಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular