HomeIndiaBREAKING: ಅಮಿತ್ ಶಾ ವಿರುದ್ಧ ಆರೋಪ: ಕೆನಡಾ ಹೈಕಮಿಷನ್ ಪ್ರತಿನಿಧಿಗೆ ಸಮನ್ಸ್

BREAKING: ಅಮಿತ್ ಶಾ ವಿರುದ್ಧ ಆರೋಪ: ಕೆನಡಾ ಹೈಕಮಿಷನ್ ಪ್ರತಿನಿಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧದ ಗಂಭೀರ ಆರೋಪದ ಮೇಲೆ ಕೆನಡಾ ಅಧಿಕಾರಿಗೆ ಭಾರತ ಸಮನ್ಸ್ ನೀಡಿ ಕರೆಸಿಕೊಂಡು ಖಂಡನೆ ವ್ಯಕ್ತಪಡಿಸಿದೆ.

ಕೆನಡಾದ ನೆಲದಲ್ಲಿ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಜಸ್ಟಿನ್ ಟ್ರುಡೊ ನೇತೃತ್ವದ ಸರ್ಕಾರದ ಆರೋಪ ಮಾಡಿದ ಕುರಿತು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದ ಹಿನ್ನಲೆಯಲ್ಲಿ ವಿದೇಶಾಂಗ ಸಚಿವಾಲಯವು ಕೆನಡಾ ಪ್ರತಿನಿಧಿಗೆ ಸಮನ್ಸ್ ನೀಡಿದೆ.

ತಮ್ಮ ಅಸಂಬದ್ಧ ಆರೋಪಕ್ಕೆ ಪ್ರತಿಕ್ರಿಯೆಯಾಗಿ ನಿನ್ನೆ ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನ್ ಪ್ರತಿನಿಧಿ ಕರೆಸಿ ಸ್ಪಷ್ಟನೆ ಕೇಳಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ರಂದೀರ್ ಜೈಸ್ವಾಲ್  ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ನಿನ್ನೆ ಕೆನಡಾದ ಹೈಕಮಿಷನ್ ಪ್ರತಿನಿಧಿಯನ್ನು ಕರೆದಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ನೀಡಿದ ಹೇಳಿಕೆ ಖಂಡಿಸಿದ್ದೇವೆ ಎಂದು ಅವರು ತಿಳಿಸಿದರು. ಕೇಂದ್ರ ಗೃಹ ಸಚಿವರ ಬಗ್ಗೆ ಮಾಡಿದ ಅಸಂಬದ್ಧ ಮತ್ತು ಆಧಾರರಹಿತ ಉಲ್ಲೇಖಗಳನ್ನು ಭಾರತ ಸರ್ಕಾರವು ಪ್ರಬಲವಾಗಿ ಖಂಡಿಸುತ್ತದೆ ಎಂದು ಕೆನಡಾ ಪ್ರತಿನಿಧಿಗೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular