ಭಾರತ-ಅಫ್ಘಾನಿಸ್ತಾನ ಟಿ-20 ಪಂದ್ಯ : ಇಂದು ʻನಮ್ಮ ಮೆಟ್ರೊʼ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು :  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಇಂದು  ಟಿ-20 ಕ್ರಿಕೆಟ್‌ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ಪ್ರಯಾಣದ ಅವಧಿಯನ್ನು ರಾತ್ರಿ 11.45 ರವರೆಗೆ ವಿಸ್ತರಿಸಲಾಗಿದೆ.

ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್‌ ಮೆಟ್ರೊ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌ ಗಳು ಇಂದು ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರಲಿವೆ. 50 ರೂ. ಮೊತ್ತದ ಪೇಪರ್ ಟಿಕೆಟ್ ಜೊತೆಗೆ, ಸಾಮಾನ್ಯ ದರದಲ್ಲಿ ಶೇ.5 ರಿಯಾಯಿತಿಯೊಂದಿಗೆ ಕ್ಯೂಆರ್ ಕೋಡ್ ಟಿಕೆಟ್‌ಗಳು, ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ.

ಅನೂಕೂಲಕರ ಪ್ರಯಾಣಕ್ಕಾಗಿ ಕ್ರಿಕೆಟ್ ಪಂದ್ಯದ ಆರಂಭಕ್ಕೆ WattsApp/ Namma Metro App/ Pay TMನಲ್ಲಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್‌ಗಳು ಮತ್ತು NCMC ಕಾರ್ಡ್ ಗಳನ್ನು ಸಹ  ಬಳಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read