HomeSportsಇಂದು ಭಾರತ - ನ್ಯೂಜಿಲೆಂಡ್ 3ನೇ ಟಿ20 ಸಮರ: ಸರಣಿ ವಶಪಡಿಸಿಕೊಳ್ಳುತ್ತಾ ಭಾರತ?

ಇಂದು ಭಾರತ – ನ್ಯೂಜಿಲೆಂಡ್ 3ನೇ ಟಿ20 ಸಮರ: ಸರಣಿ ವಶಪಡಿಸಿಕೊಳ್ಳುತ್ತಾ ಭಾರತ?

ಗುವಾಹಟಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸತತ ಎರಡು ಗೆಲುವುಗಳೊಂದಿಗೆ ಅಬ್ಬರಿಸುತ್ತಿರುವ ಟೀಮ್ ಇಂಡಿಯಾ ಈಗ ಸರಣಿ ಕೈವಶ ಮಾಡಿಕೊಳ್ಳುವ ಗುರಿಯೊಂದಿಗೆ ಅಖಾಡಕ್ಕಿಳಿಯುತ್ತಿದೆ. ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿರುವ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಇಂದು ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಪಂದ್ಯದಲ್ಲಿ ಕಿವೀಸ್ ಪಡೆಯನ್ನು ಎದುರಿಸಲಿದೆ.

ಸರಣಿ ಗೆಲುವಿನ ಮೇಲೆ ಕಣ್ಣು ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ಈಗಾಗಲೇ 2-0 ಅಂತರದ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ನಾಗ್ಪುರದಲ್ಲಿ ಜಯಿಸಿದ್ದ ಭಾರತ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ ಬೃಹತ್ ಮೊತ್ತವನ್ನು ಸುಲಭವಾಗಿ ಬೆನ್ನಟ್ಟಿತ್ತು. ಆರಂಭಿಕ ಆಟಗಾರ ಇಶಾನ್ ಕಿಶನ್ ಅವರ ಬಿರುಸಿನ ಬ್ಯಾಟಿಂಗ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ಎರಡನೇ ಪಂದ್ಯದಲ್ಲಿ ಆಧಿಕಾರಯುತ ಗೆಲುವು ದಾಖಲಿಸಿತ್ತು. ಇಂದಿನ ಪಂದ್ಯವನ್ನು ಗೆದ್ದರೆ ಭಾರತ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಮೂರನೇ ಟಿ20 ಪಂದ್ಯ ಜನವರಿ 25 ರಂದು ಭಾನುವಾರ ನಡೆಯಲಿದೆ. ಗುವಾಹಟಿಯ ಬರ್ಸಾಪಾರ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು ಸಂಜೆ 6:30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇರ ಪ್ರಸಾರ ಎಲ್ಲ ವೀಕ್ಷಿಸಬಹುದು ಈ ರೋಚಕ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸಲು ಬಯಸುವವರು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ನೋಡಬಹುದು. ಮೊಬೈಲ್ ಅಥವಾ ಡಿಜಿಟಲ್ ಫ್ಲಾಟ್‌ಫಾರ್ಮ್‌ನಲ್ಲಿ ಜಿಯೋ ಹಾಟ್‌ಸ್ಟಾರ್ ಮೂಲಕ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.

ತಂಡಗಳ ವಿವರ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಇಶಾನ್ ಕಿಶನ್ ಮತ್ತು ರವಿ ಬಿಷ್ಣೋಯ್.

ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಜಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವನ್ ಜಾಕೋಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ ಮತ್ತು ಕ್ರಿಸ್ಟಿಯನ್ ಕ್ಲಾರ್ಕ್.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular