ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿ ಟೀಮ್ ಇಂಡಿಯಾ ನಾಯಕನನ್ನು ಬಿಗಿದಪ್ಪಿದ ಅಭಿಮಾನಿ…!

ಶನಿವಾರದಂದು ರಾಯಪುರದಲ್ಲಿ ನಡೆದ ಟೀಮ್ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಭಾರತ, ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಬ್ಬರಿಸಿದ್ದು ಕೇವಲ 50 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡ 51 ರನ್ ಸಿಡಿಸಿದ್ದಾರೆ. ಅಲ್ಲದೆ ಮೊಹಮ್ಮದ್ ಶಮಿ ಕೇವಲ 18 ರನ್ ನೀಡಿ ಮೂರು ವಿಕೆಟ್ ಗಳಿಸಿದ್ದು ಗೆಲುವಿಗೆ ನೆರವಾಯಿತು.

ಈ ಪಂದ್ಯದ ವೇಳೆ ಅಪರೂಪದ ಘಟನೆಯೊಂದು ನಡೆದಿದೆ. ಟೀಮ್ ಇಂಡಿಯಾ ಬ್ಯಾಟಿಂಗ್ ನ 10ನೇ ಓವರ್ ವೇಳೆ ಬಾಲಕನೊಬ್ಬ ಮೈದಾನಕ್ಕೆ ನುಗ್ಗಿ ರೋಹಿತ್ ಶರ್ಮಾ ಅವರನ್ನು ಅಪ್ಪಿಕೊಂಡಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿ ಅಲ್ಲಿಗೆ ಬಂದಿದ್ದು, ಬಾಲಕನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ರೋಹಿತ್ ಶರ್ಮಾ ಸಿಬ್ಬಂದಿಗೆ ಸೂಚಿಸಿದ್ದಾರೆ.

https://www.youtube.com/watch?v=mWOj90LUq9M&t=2s

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read