HomeIndiaBIG BREAKING: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಫೈನಲ್...

BIG BREAKING: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಫೈನಲ್ ಗೆ ಎಂಟ್ರಿ

ದುಬೈ: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ ಟ್ರೋಫಿಯ ಮೊದಲ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯಗಳಿಸಿ ಫೈನಲ್ ಪ್ರವೇಶಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.3 ಓವರ್ ಗಳಲ್ಲಿ 264 ರನ್ ಗಳಿಗೆ ಆಲೌಟ್ ಆಯಿತು. ಟ್ರಾವಿಸ್ ಹೆಡ್ 39, ಸ್ಟೀವ್ ಸ್ಮಿತ್ 73, ಮಾರ್ನಸ್ ಲಬುಶಾಂಗೇ 29, ಅಲೆಕ್ಸ್ ಕ್ಯಾರಿ 61 ರನ್ ಗಳಿಸಿದರು. ಭಾರತದ ಪರ ಮಹಮದ್ ಶಮಿ 3,  ವರುಣ್ ಚಕ್ರವರ್ತಿ 2, ರವೀಂದ್ರ ಜಡೇಜಾ 2 ವಿಕೆಟ್ ಪಡೆದರು.

265 ರನ್ ಗೆಲುವಿನ ಗುರಿ ಬೆನ್ನತ್ತಿದ ಭಾರತ 4 ವಿಕಟ್ ಗಳಿಂದ ಗೆಲುವು ಕಂಡಿದೆ. ಭಾರತ 48.1 ಓವರ್ ಗಳಲ್ಲಿ 6 ವಿಕೆಟ್ ಗೆ 267 ರನ್ ಗಳಿಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಪರ ರೋಹಿತ್ ಶರ್ಮಾ 28, ವಿರಾಟ್ ಕೊಹ್ಲಿ 84, ಶ್ರೇಯಸ್ ಅಯ್ಯರ್ 45, ಅಕ್ಷರ್ ಪಟೇಲ್ 27, ಕೆ.ಎಲ್. ರಾಹುಲ್ ಅಜೇಯ 42, ಹಾರ್ದಿಕ್ ಪಾಂಡ್ಯ 28, ರವೀಂದ್ರ ಜಡೇಜ ಅಜೇಯ 2 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಆಡಮ್ ಜಂಪ 2, ನೇಥನ್ ಎಲ್ಲಿಸ್ 2 ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್

ಆಸ್ಟ್ರೇಲಿಯಾ 264/10(49.3)

ಭಾರತ 267/6(48.1)

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular