ನಿನ್ನೆ ( ಫೆಬ್ರವರಿ 6 ) ಹರಾರೆ ಕ್ರೀಡಾಂಗಣದಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 100 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
ವೈಭವ್ ಸೂರ್ಯವಂಶಿ 180 ಎಸೆತಗಳಲ್ಲಿ 175 ರನ್ ಚಚ್ಚಿ ಅಬ್ಬರಿಸಿದ್ದು ಈ ಗೆಲುವಿಗೆ ಪ್ರಮುಖ ಕಾರಣವಾಯಿತು. ಇನ್ನು ಈ ಟ್ರೋಫಿಯನ್ನು ಗೆಲ್ಲುವ ಮೂಲಕ ಭಾರತ 2022ರಿಂದ ಇಲ್ಲಿಯವರೆಗೆ ಒಟ್ಟು 7 ಐಸಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಹೀಗೆ ಕಳೆದ ನಾಲ್ಕು ವರ್ಷಗಳಲ್ಲಿ ಭಾರತ ಯಾವ ಯಾವ ಐಸಿಸಿ ಟ್ರೋಫಿಯನ್ನು ಗೆದ್ದದೆ ಎಂಬುದರ ವಿವರ ಮುಂದಿದೆ.
2022ರ ಅಂಡರ್ 19 ವಿಶ್ವಕಪ್: ಫೆಬ್ರವರಿ 5, 2022ರಂದು ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಅಂಡರ್ 19 ಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 4 ವಿಕೆಟ್‌ಗಳ ಗೆಲುವನ್ನ ಕಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಕೇವಲ 189 ರನ್‌ಗೆ ಆಲ್‌ಔಟ್ ಆಗಿತ್ತು. ಭಾರತ 47.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿತ್ತು.
2023ರ ಅಂಡರ್ 19 ವನಿತೆಯರ ಟಿ ಟ್ವೆಂಟಿ ವಿಶ್ವಕಪ್: 2023ರ ಜನವರಿ 29ರಂದು ನಡೆದಿದ್ದ ಈ ಪಂದ್ಯದಲ್ಲಿ ಇಂಗ್ಲೆಂಡ್ 17.1 ಓವರ್‌ಗಳಲ್ಲಿ 68 ರನ್‌ಗಳಿಗೆ ಆಲ್‌ಔಟ್ ಅಗಿತ್ತು. ಭಾರತ 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್ ಕಲೆಹಾಕಿ 7 ವಿಕೆಟ್‌ಗಳಿಂದ ಗೆದ್ದು ಟ್ರೋಫಿ ಎತ್ತಿಹಿಡಿದಿತ್ತು.
2024ರ ಟಿ ಟ್ವೆಂಟಿ ವಿಶ್ವಕಪ್: 2024ರ ಜೂನ್ 29ರಂದು ನಡೆದ ಈ ಪಂದ್ಯದಲ್ಲಿ ಭಾರತ 7 ರನ್‌ಗಳ ರೋಚಕ ಗೆಲುವನ್ನು ಕಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತ್ತು. ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಕಲೆಹಾಕಿತು.
ಅಂಡರ್ 19 ವನಿತೆಯರ ಟಿ ಟ್ವೆಂಟಿ ವಿಶ್ವಕಪ್ 2025: ಫೆಬ್ರವರಿ 2ರಂದು ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ ಕೇವಲ 82 ರನ್‌ಗೆ ಆಲ್‌ಔಟ್ ಆಗಿತ್ತು. ಭಾರತ 11.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 84 ರನ್ ಕಲೆಹಾಕಿ 9 ವಿಕೆಟ್‌ಗಳ ಗೆಲುವನ್ನು ಕಂಡಿತ್ತು.
ಚಾಂಪಿಯನ್ಸ್ ಟ್ರೋಫಿ 2025: ಮಾರ್ಚ್ 9 ರಂದು ನಡೆದಿದ್ದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಕಲೆಹಾಕಿತ್ತು. ಭಾರತ 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿತ್ತು.
2025ರ ವನಿತೆಯರ ವಿಶ್ವಕಪ್: ನವೆಂಬರ್ 2ರಂದು ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್ ಕಲೆಹಾಕಿತ್ತು. ದಕ್ಷಿಣ ಆಫ್ರಿಕಾ 45.3 ಓವರ್‌ಗಳಲ್ಲಿ 246 ರನ್‌ಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಭಾರತ 52 ರನ್‌ಗಳ ಭರ್ಜರಿ ಗೆಲುವು ಕಂಡಿತ್ತು.
2026ರ ಅಂಡರ್ 19 ವಿಶ್ವಕಪ್: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಕಲೆಹಾಕಿತ್ತು. ಇಂಗ್ಲೆಂಡ್ 40.2 ಓವರ್‌ಗಳಲ್ಲಿ 311 ರನ್‌ಗೆ ಆಲ್‌ಔಟ್ ಆಗಿತ್ತು.

