ಜಮ್ಮು-ಕಾಶ್ಮೀರ : ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಂದು ಇಬ್ಬರು ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ .ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ಶ್ರೀನಗರ ಬಳಿ ‘ಆಪರೇಷನ್ ಮಹಾದೇವ್’ ಅಡಿಯಲ್ಲಿ ಭದ್ರತಾ ಪಡೆಗಳು ಕೊಂದ ಕೆಲವು ದಿನಗಳ ನಂತರ ಈ ಎನ್‌ಕೌಂಟರ್ ನಡೆದಿದೆ.
ಶುಕ್ರವಾರ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಅಖಾಲ್ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭಯೋತ್ಪಾದಕರು ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್ಕೌಂಟರ್ ಆಗಿ ಬದಲಾಯಿತು.
You Might Also Like
TAGGED:ಜಮ್ಮು-ಕಾಶ್ಮೀರ