HomeIndiaBIG NEWS: ಸೇನಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ವಿಶೇಷ ರೈಲು ಸ್ಫೋಟಕ್ಕೆ ಯತ್ನ

BIG NEWS: ಸೇನಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ವಿಶೇಷ ರೈಲು ಸ್ಫೋಟಕ್ಕೆ ಯತ್ನ

ಭೋಪಾಲ್: ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ಸಿಬ್ಬಂದಿಗಳನ್ನು ಕರೆತರುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಬುರ್ಹಾನ್ ಪುರ ಜಿಲ್ಲೆಯ ಸಗ್ಫಾಟ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದೆ.

ರೈಲು ಹಳಿಯ ಮೇಲೆ 10 ಡಿಟೋನೇಟರ್ ಗಳು ಹಾಗೂ ಗ್ಯಾಸ್ ಸಿಲಿಂಡರ್ ಗಳು ಪತ್ತೆಯಾಗಿವೆ. ರೈಲು ಡಿಟೋನೇಟರ್ ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟಗೊಂಡಿದ್ದರಿಂದ ಲೋಕೋ ಪೈಲೆಟ್ ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣ ಠಾಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶತ್ ಯಾವುದೇ ಪ್ರಾಣಹಾನಿ ಸಭವಿಸಿಲ್ಲ. ಎಟಿಎಸ್ ಅಧಿಕಾರಿಗಳು, ಎನ್ ಐಎ ಹಾಗೂ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular