HomeUncategorizedದೀಪಾವಳಿ ಹಬ್ಬದ ಸಡಗರ: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ಭಾರತೀಯ ಕ್ರಿಕೆಟ್ ತಾರೆಯರು

ದೀಪಾವಳಿ ಹಬ್ಬದ ಸಡಗರ: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ಭಾರತೀಯ ಕ್ರಿಕೆಟ್ ತಾರೆಯರು

ಭಾರತೀಯ ಕ್ರಿಕೆಟ್ ಲೋಕದ ದಿಗ್ಗಜರು ಹಾಗೂ ಪ್ರಮುಖ ತಾರಾ ಆಟಗಾರರು ಈ ಬಾರಿಯ ದೀಪಾವಳಿ ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಆಟಗಾರರು ಸರಣಿಯ ನಿಮಿತ್ತ ವಿದೇಶದಲ್ಲೇ ಹಬ್ಬದ ದಿನಗಳನ್ನು ಕಳೆದಿದ್ದರೆ, ಮಾಜಿ ನಾಯಕರು ಹಾಗೂ ಇತರೆ ಜನಪ್ರಿಯ ಆಟಗಾರರು ತಮ್ಮ ಸ್ವಗೃಹದಲ್ಲಿ ಕುಟುಂಬದ ಸದಸ್ಯರೊಂದಿಗೆ ದೀಪಾವಳಿಯ ಖುಷಿಯನ್ನು ಹಂಚಿಕೊಂಡಿದ್ದಾರೆ.

ಭಾರತ ತಂಡದ ಮಾಜಿ ಯಶಸ್ವಿ ನಾಯಕ ಎಂ.ಎಸ್. ಧೋನಿ ಅವರು ತಮ್ಮ ಪತ್ನಿ ಸಾಕ್ಷಿ ಧೋನಿ ಮತ್ತು ಮುದ್ದಿನ ಪುತ್ರಿ ಜೀವಾ ಜೊತೆಗೂಡಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಸಾಂಪ್ರದಾಯಿಕ ಉಡುಪುಗಳಲ್ಲಿ ಕಂಗೊಳಿಸುತ್ತಿರುವ ಈ ಕುಟುಂಬದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿವೆ. ಇನ್ನು ಯುವ ಆಟಗಾರ ಅಭಿಷೇಕ್ ಶರ್ಮಾ ತಮ್ಮ ಮನೆಯಲ್ಲಿ ಕುಟುಂಬದವರೊಂದಿಗೆ ಸಾಂಪ್ರದಾಯಿಕ ಪೂಜಾ ಕಾರ್ಯಗಳನ್ನು ನೆರವೇರಿಸಿದರೆ, ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಪುತ್ರ ಅಗಸ್ತ್ಯ ಹಾಗೂ ಸಂಗಾತಿ ಮಹಿಕಾ ಶರ್ಮಾ ಅವರೊಂದಿಗೆ ಹಬ್ಬದ ವಿಶೇಷ ಕ್ಷಣಗಳನ್ನು ಕಳೆDದ್ದಾರೆ.

ಇದರೊಂದಿಗೆ ಯುಜ್ವೇಂದ್ರ ಚಹಾಲ್ ಸಾಂಪ್ರದಾಯಿಕ ಕಪ್ಪು ಉಡುಗೆಯಲ್ಲಿ ಕಂಗೊಳಿಸಿ ದೀಪಗಳ ಅಲಂಕಾರದ ನಡುವೆ ಫೋಸ್ ನೀಡಿದ್ದಾರೆ. ಅನುಭವಿ ಆಟಗಾರರಾದ ಶಿಖರ್ ಧವನ್, ಸುರೇಶ್ ರೈನಾ, ಹರ್ಭಜನ್ ಸಿಂಗ್ ಹಾಗೂ ವೇಗದ ಬೌಲರ್ ಭುವನೇಶ್ವರ್ ಕುಮಾರ್ ತಮ್ಮ ಪತ್ನಿ ಹಾಗೂ ಕುಟುಂಬದವರೊಂದಿಗೆ ದೀಪಗಳನ್ನು ಬೆಳಗಿ, ಸಿಹಿ ಹಂಚುತ್ತಾ ಹಬ್ಬದ ಸಡಗರವನ್ನು ಕಣ್ತುಂಬಿಕೊಂಡಿದ್ದಾರೆ. ಈ ಎಲ್ಲಾ ಕ್ರಿಕೆಟಿಗರು ಹಂಚಿಕೊಂಡ ಸುಂದರ ಕ್ಷಣಗಳ ಚಿತ್ರಗಳು ಅಭಿಮಾನಿಗಳ ಮನಸೆಳೆದಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular