ಬೆಂಗಳೂರು: ಅರ್ಜುನ ಪ್ರಶಸ್ತಿ ವಿಜೇತ ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ ವಿರುದ್ಧ ಬೆಂಗಳೂರು ಪೊಲೀಸರು ಮಂಗಳವಾರ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
2018 ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ವರುಣ್ ಅವರೊಂದಿಗೆ ಸಂಪರ್ಕಕ್ಕೆ ಬಂದೆ ಮತ್ತು 17 ವರ್ಷದವಳಿದ್ದಾಗ ಮದುವೆಯಾಗುವುದಾಗಿ ಭರವಸೆ ನೀಡಿ ಆಟಗಾರ ಅನೇಕ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು 22 ವರ್ಷದ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
“ಮಹಿಳೆಯಿಂದ ಸ್ವೀಕರಿಸಿದ ದೂರಿನ ಆಧಾರದ ಮೇಲೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸೂಕ್ತ ಸೆಕ್ಷನ್ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರಚೋದನೆ) ಅಡಿಯಲ್ಲಿ ಹಾಕಿ ಆಟಗಾರನ ವಿರುದ್ಧ ನಾವು ಸೋಮವಾರ ಪ್ರಕರಣ ದಾಖಲಿಸಿದ್ದೇವೆ” ಎಂದು ಬೆಂಗಳೂರು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.