HomeLatest News‘ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಾತಿಗೆ ಜೂ. 7 ರಂದು ಪ್ರವೇಶ ಪರೀಕ್ಷೆ, ಇಲ್ಲಿದೆ...

‘ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಾತಿಗೆ ಜೂ. 7 ರಂದು ಪ್ರವೇಶ ಪರೀಕ್ಷೆ, ಇಲ್ಲಿದೆ ಮಾಹಿತಿ

ಧಾರವಾಡ : ಜನವರಿ 2027 ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 07, 2026 (ಭಾನುವಾರ) ರಂದು ನಡೆಸಲಾಗುವುದು.

ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಜನವರಿ 01, 2027 ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2014 ರಿಂದ 01-07-2015 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವ ರೀತಿಯ ವಿಧ್ಯಾಭ್ಯಾಸ, ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98,650 ಗಳು (Gen Category) ಹಾಗೂ ರೂ 81,850 (SC/ST) ಗಳಾಗಿರುತ್ತದೆ. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000 ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಸದರಿ ಮೊತ್ತವನ್ನು ವಿಧ್ಯಾರ್ಥಿಗಳು ಪದವೀಧರರಾದ ಬಳಿಕ ಹಿಂತಿರುಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ನಮೂನೆಗಳನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜ, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಎಪ್ರೀಲ್ 05, 2026 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು- 25 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-25589459 ಅಥವಾ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular