HomeInternationalBig Breaking: ಇರಾನ್ ತೊರೆಯಲು ಭಾರತೀಯರಿಗೆ ತುರ್ತು ಮಾಹಿತಿ

Big Breaking: ಇರಾನ್ ತೊರೆಯಲು ಭಾರತೀಯರಿಗೆ ತುರ್ತು ಮಾಹಿತಿ

ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್  ಟ್ರಂಪ್ ಹೇಳಿದ್ದಾರೆ. ಇರಾನ್ ಸಹ ಹೇಳಿಕೆಗಳಿಗೆ ತಿರುಗೇಟು ನೀಡುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಉಂಟಾಗಿದೆ.

ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಸಂದರ್ಭದಲ್ಲಿ ಜನರ ಆತಂಕ ದೂರ ಮಾಡಲು ಪ್ರಕಟಣೆಯೊಂದನ್ನು ಹೊರಡಿಸಿದೆ. ಅಲ್ಲದೇ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಇರಾನ್‌ನಲ್ಲಿರುವ ಭಾರತೀಯರಿಗಾಗಿ ಹಲವು ಸಲಹೆಗಳನ್ನು ನೀಡಿದೆ.

ಭಾರತ 2026ರ ಜನವರಿ 5ರಂದು ಹೊರಡಿಸಿದ ಹಲವು ಸಲಹೆಯ ಮುಂದುವರಿದ ಭಾಗವಾಗಿ ಮತ್ತು ಇರಾನ್‌ನಲ್ಲಿನ ಬದಲಾಗುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಸೂಚನೆಗಳನ್ನು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು (ವಿದ್ಯಾರ್ಥಿಗಳು, ಯಾತ್ರಿಕರು, ಉದ್ಯಮಿಗಳು ಮತ್ತು ಪ್ರವಾಸಿಗರು) ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಇರಾನ್ ತೊರೆಯಲು ಸೂಚಿಸಲಾಗಿದೆ.

ಇತರ ಪ್ರಮುಖ ಸೂಚನೆಗಳು

  • 2026ರ ಜನವರಿ 14 ರಂದು ನೀಡಲಾದ ಸಲಹೆಯನ್ನು ಪುನರುಚ್ಚರಿಸಲಾಗಿದೆ. ಎಲ್ಲಾ ಭಾರತೀಯ ನಾಗರಿಕರು ಮತ್ತು ಭಾರತೀಯ ಮೂಲದ ವ್ಯಕ್ತಿಗಳು ಹೆಚ್ಚಿನ ಜಾಗರೂಕತೆ ವಹಿಸಬೇಕು. ಪ್ರತಿಭಟನೆ ನಡೆಯುವ ಪ್ರದೇಶಗಳಿಂದ ದೂರವಿರಬೇಕು, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಬೆಳವಣಿಗೆ ಗಮನಿಸುತ್ತಿರಬೇಕು.
  • ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ತಮ್ಮ ಪಾಸ್‌ಪೋರ್ಟ್ ಮತ್ತು ಗುರುತಿನ ಚೀಟಿಗಳು ಸೇರಿದಂತೆ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮ ಬಳಿ ಸಿದ್ಧವಾಗಿಟ್ಟುಕೊಳ್ಳಬೇಕು. ಈ ನಿಟ್ಟಿನಲ್ಲಿ ಯಾವುದೇ ಸಹಾಯಕ್ಕಾಗಿ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ.
  • ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ ಸಂಖ್ಯೆ. ಮೊಬೈಲ್ ಸಂಖ್ಯೆಗಳು +989128109115; +989128109109; +989128109102; +989932179359. ಇಮೇಲ್: [email protected]
  • ಇರಾನ್‌ನಲ್ಲಿರುವ ಮತ್ತು ಇಲ್ಲಿಯವರೆಗೆ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳದ ಎಲ್ಲಾ ಭಾರತೀಯ ನಾಗರಿಕರು ಈ ಲಿಂಕ್ ಮೂಲಕ (https://www.meaers.com/request/home) ನೋಂದಾಯಿಸಿಕೊಳ್ಳಲು ವಿನಂತಿಸಲಾಗಿದೆ.
  • ಈ ಲಿಂಕ್ ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲೂ ಲಭ್ಯವಿದೆ. ಇರಾನ್‌ನಲ್ಲಿ ಇಂಟರ್‌ನೆಟ್ ವ್ಯತ್ಯಯದಿಂದಾಗಿ ಯಾವುದೇ ಭಾರತೀಯ ನಾಗರಿಕರು ನೋಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಭಾರತದಲ್ಲಿರುವ ಅವರ ಕುಟುಂಬದವರು ಅವರ ಪರವಾಗಿ ನೋಂದಾಯಿಸಬಹುದು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular