HomeBusinessಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಒಟಿಪಿ ಬಳಸಿ ಉಳಿತಾಯ ಖಾತೆ ತೆರೆಯಲು ಅವಕಾಶ

ಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಒಟಿಪಿ ಬಳಸಿ ಉಳಿತಾಯ ಖಾತೆ ತೆರೆಯಲು ಅವಕಾಶ

ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಗ್ರಾಹಕರಿಗೆ ಆಧಾರ್ ಒಟಿಪಿ ಮೂಲಕ ಉಳಿತಾಯ ಖಾತೆ ತೆರೆಯುವ ಸೌಲಭ್ಯ ಕಲ್ಪಿಸಲಾಗಿದೆ.

ಕಾರ್ಪೊರೇಟ್ ವಲಯದ ಗ್ರಾಹಕರ ಅನುಕೂಲಕ್ಕಾಗಿ ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್ಫೇಸ್(ಎಪಿಐ) ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ

ಇಂಡಿಯನ್ ಓವರ್ಸೀಸ್ ಬ್ಯಾಂಕ್ 89ನೇ ಸಂಸ್ಥಾಪನಾ ದಿನಾಚರಣೆಯ ಸಂಭ್ರಮದಲ್ಲಿದ್ದು, ಇದರ ಬೆನ್ನಲ್ಲೇ ಗ್ರಾಹಕರಿಗೆ ಅನೇಕ ಸೌಲಭ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಹಕರು ಬ್ಯಾಂಕಿನ ವೆಬ್ಸೈಟ್ ಗೆ ಹೋಗಿ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿ ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಇದನ್ನು ಬಳಸಿಕೊಂಡು ಖಾತೆ ತೆರೆಯಬಹುದಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಜಯಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಬಿಐ ಆಧಾರ್ ಒಟಿಪಿ ಆಧಾರಿತ ಇ-ಕೆವೈಸಿ ಮಾರ್ಗಸೂಚಿಗಳ ಅನ್ವಯ ಈ ಸೌಲಭ್ಯ ಕಲ್ಪಿಸಲಾಗಿದ್ದು, ಯಾವುದೇ ತೊಂದರೆ ಇಲ್ಲದೆ ಗ್ರಾಹಕರು ಖಾತೆ ತೆರೆಯಬಹುದಾಗಿದೆ. ಇದಕ್ಕೆ ಹೆಚ್ಚಿನ ದಾಖಲೆ ಸಲ್ಲಿಸುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular