ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: 150ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ‘ವಿಶೇಷ ನವರಾತ್ರಿ ಊಟ’ದ ವ್ಯವಸ್ಥೆ

ನವರಾತ್ರಿ ಹಬ್ಬದ ಸಮಯದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೇಯು 150 ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ವಿಶೇಷ ಊಟದ ವ್ಯವಸ್ಥೆ ಪ್ರಾರಂಭಿಸಿದೆ ಎಂದು ರೈಲ್ವೆ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರು ಈ ರುಚಿಕರವಾದ ನವರಾತ್ರಿ ವಿಶೇಷ ಥಾಲಿಯನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಬಹುದು.

ಸಚಿವಾಲಯದ ಪ್ರಕಾರ, ಪ್ರಯಾಣದ ಸಮಯದಲ್ಲಿ, ನವರಾತ್ರಿಯನ್ನು ಆಚರಿಸುವ ಪ್ರಯಾಣಿಕರು ಆಗಾಗ್ಗೆ ಆಹಾರ ಮತ್ತು ಪಾನೀಯದ ಬಗ್ಗೆ ವಿವಿಧ ಸವಾಲುಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಪರಿಹರಿಸಲು, ಭಾರತೀಯ ರೈಲ್ವೆಯು 150 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ ಥಾಲಿಯನ್ನು ಪರಿಚಯಿಸಿದೆ.

ಈ ನಿಲ್ದಾಣಗಳಲ್ಲಿ ಕೆಲವು ಮುಂಬೈ ಸೆಂಟ್ರಲ್, ದೆಹಲಿ ಜಂಕ್ಷನ್, ಸೂರತ್, ಜೈಪುರ, ಲಕ್ನೋ, ಪಾಟ್ನಾ ಜಂಕ್ಷನ್, ಲುಧಿಯಾನ, ದುರ್ಗ್, ಚೆನ್ನೈ ಸೆಂಟ್ರಲ್, ಸಿಕಂದರಾಬಾದ್, ಅಮರಾವತಿ, ಹೈದರಾಬಾದ್, ತಿರುಪತಿ, ಜಲಂಧರ್ ಸಿಟಿ, ಉದಯಪುರ ನಗರ, ಬೆಂಗಳೂರು ಕ್ಯಾಂಟ್, ನವದೆಹಲಿ, ಥಾಣೆ, ಪುಣೆ, ಮಂಗಳೂರು ಸೆಂಟ್ರಲ್ ಸ್ಟೇಷನ್ ಇತರವು ಸೇರಿವೆ.

ನವರಾತ್ರಿಯ ಸಾರವನ್ನು ಗೌರವಿಸುವ ವ್ರತ ಥಾಲಿ ತಯಾರಿಕೆಯಲ್ಲಿ ಗುಣಮಟ್ಟ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಪ್ರಯಾಣಿಕರು ತಮ್ಮ PNR ಸಂಖ್ಯೆಯನ್ನು IRCTC ಅಪ್ಲಿಕೇಶನ್‌ನಲ್ಲಿ ನಮೂದಿಸುವ ಮೂಲಕ ಅಥವಾ IRCTC ಇ-ಕೇಟರಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಥಾಲಿಯನ್ನು ಸುಲಭವಾಗಿ ಬುಕ್ ಮಾಡಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read