ಚಿಕಾಗೋ: ಅಮೆರಿಕದ ಚಿಕಾಗೋದಲ್ಲಿರುವ ನಿವಾಸದ ಬಳಿ ನಾಲ್ವರು ಶಸ್ತ್ರಸಜ್ಜಿತ ಕಳ್ಳರು ಭಾರತೀಯ ವಿದ್ಯಾರ್ಥಿಯೊಬ್ಬನ ಮೇಲೆ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.
ವಿದ್ಯಾರ್ಥಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಹಿಂಬಾಲಿಸಿದ ದುಷ್ಕರ್ಮಿಗಳು, ವಿದ್ಯಾರ್ಥಿಯನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ಬಳಿಕ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದಾನೆ.
ಈ ವರ್ಷ ಅಮೆರಿಕದಲ್ಲಿ ನಾಲ್ವರು ಭಾರತೀಯ ಮೂಲದ ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಘಟನೆ ಕಳವಳವನ್ನುಂಟು ಮಾಡಿದೆ. ಹೈದರಾಬಾದ್ನ ಲಂಗರ್ ಹೌಜ್ ಮೂಲದ ಸೈಯದ್ ಮಜ್ಜರ್ ಅಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಅಮೆರಿಕದ ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯಕ್ಕೆ ತೆರಳಿದ್ದಾರೆ. ಅಲಿ ಮೇಲಿನ ದಾಳಿಯ ಭಯಾನಕ ವೀಡಿಯೊ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋ ನೋಡಿ:
https://twitter.com/jsuryareddy/status/1754872232059285906?ref_src=twsrc%5Etfw%7Ctwcamp%5Etweetembed%7Ctwterm%5E1754872232059285906%7Ctwgr%5Ec99057afaa27c3d09d71c965f1dc0afd61fad179%7Ctwcon%5Es1_c10&ref_url=https%3A%2F%2Fapi-news.dailyhunt.in%2F