BIG NEWS : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಐತಿಹಾಸಿಕ ಸಾಧನೆ : ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮಹತ್ವದ ಸಾಧನೆ! ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದೇವೆ. ಭಾರತದ ಜನರು ರೋಮಾಂಚನಗೊಂಡಿದ್ದಾರೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪ್ರತಿಯೊಂದು ವಿಸ್ಮಯಕಾರಿ ಪ್ರದರ್ಶನವು ಇತಿಹಾಸವನ್ನು ನಿರ್ಮಿಸಿದೆ ಮತ್ತು ನಮ್ಮ ಹೃದಯಗಳನ್ನು ಗೆದ್ದಿದೆ.
ಅಕ್ಟೋಬರ್ 10 ರಂದು ನಮ್ಮ ಎಲ್ಲ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತ 100 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. ಅಧಿಕೃತವಾಗಿ ಭಾರತವು ಇಲ್ಲಿಯವರೆಗೆ 100 ಪದಕಗಳನ್ನು ಗೆದ್ದಿದೆ. ಈ ಹಿಂದೆ 2018ರಲ್ಲಿ ಭಾರತ 70 ಪದಕಗಳನ್ನು ಜಯಿಸಿತ್ತು. ಒಟ್ಟು 100 ಪದಕಗಳನ್ನು ಗೆದ್ದಿರುವ ಭಾರತ ಹೊಸ ಇತಿಹಾಸ ನಿರ್ಮಿಸಿದೆ.

https://twitter.com/narendramodi/status/1710487198544593024?ref_src=twsrc%5Etfw%7Ctwcamp%5Etweetembed%7Ctwterm%5E1710487198544593024%7Ctwgr%5E7739918612c902528237b1a642ae3c93b4d8e658%7Ctwcon%5Es1_&ref_url=https%3A%2F%2Fvistaranews.com%2Fsports%2Findias-historic-achievement-in-asian-games-appreciated-by-prime-minister-modi%2F473897.html

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read