ಬೆಂಗಳೂರು: ಒಂದು ವಾರದಿಂದ ಇಂಡಿಗೋ ವಿಮಾನ ಹಾರಟದಲ್ಲಿ ಭಾರಿ ವ್ಯತ್ಯಯವುಂಟದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿತ್ತು. ಸದ್ಯ ಇಂಡಿಗೋ ವಿಮಾನ ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಸಂಚಾರ ಕ್ರಮೇಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ವಿಮಾನ ಹಾರಾಟ ಭಾಗಶಃ ಸುಧಾರಿಸಿದ್ದು ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ.
ಇಂದು ಬೆಳಿಗ್ಗೆಯಿಂದಲೇ ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಇಂಡಿಗೋ ವಿಮಾನಗಳ ಹಾರಾಟ ಪುನರಾರಂಭವಾಗಿದೆ. ವಿಮಾನ ಹಾರಾಟ ಆರಂಭವಾಗುತ್ತಿದ್ದಂತೆ ವಿಮಾಅನ ನಿಲ್ದಾಣದಲ್ಲಿ ಇಂಡಿಗೋ ಕೌಂಟರ್ ಮುಂದೆ ಪ್ರಯಾಣಿಕರ ಸರದಿ ಕಂಡು ಬಂದಿದೆ.
ಇನ್ನು ದೆಹಲಿ, ಲಖನೌ, ಮುಂಬೈ, ಹೈದರಬಾದ್ ಭವನೇಶ್ವರ, ರಾಯಪುರ ಸೇರಿದಂತೆ ವಿವಿಧೆಡೆ ತೆರಳಬೇಕಿದ್ದ 60ಕ್ಕೂ ಹೆಚ್ಚು ವಿಮಾನಗಳಿ ಇಂದು ರದ್ದಾಗಿವೆ. ಈ ಬಗ್ಗೆ ಮುಂಚಿತವಾಗಿ ಇಂಡಿಗೋ ಪ್ರಯಾಣಿಕರಿಗೆ ಮಾಹಿತಿ ನೀಡಿದೆ. ಇನ್ನೆರಡು ದಿನಗಳಲ್ಲಿ ಇಂಡಿಗೋ ವಿಮಾನಗಳ ಸಂಪೂರ್ಣ ಕಾರ್ಯಾಚರಣೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.
