HomeLatest NewsBIG NEWS: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್ ದರದಲ್ಲಿಯೂ ದುಪ್ಪಟ್ಟು ಏರಿಕೆ

BIG NEWS: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್ ದರದಲ್ಲಿಯೂ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯವುಂಟಾಗಿ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ ಟಿಕೆಟ್ ದರ ಭಾರಿ ಏರಿಕೆಯಾಗಿತ್ತು. ಇದೀಗ ವಿಮಾನಗಳಂತೆ ಬಸ್ ಟಿಕೆಟ್ ದರಗಳೂ ದುಪ್ಪಟ್ಟಾಗಿದ್ದು, ಪ್ರಯಾಣಿಕರು ದಂಗಾಗಿದ್ದಾರೆ.

ಬೆಂಗಳೂರಿನಿಂದ ಮುಂಬೈ, ಪುಣೆ ನಗರಗಳಿಗೆ ಸಂಚರಿಸುವ ಖಾಸಗಿ ಬಸ್ ಗಳ ಪ್ರಯಾಣ ದರ ಭಾರಿ ಹೆಚ್ಚಳವಾಗಿದೆ. ದೇಶಾದ್ಯಂತ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಗಳು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ.

ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಮುಂಬೈಗೆ 1500 ರೂ ನಿಂದ 2500 ರೂ ಇದ್ದ ಬಸ್ ದರ ಈಗ 4500 ರಿಂದ 10,000 ರೂವರೆಗೂ ಏರಿಕೆಯಾಗಿದೆ. ಬೆಂಗಳೂರಿನಿಂದ ಪುಣೆಗೆ 1200 ರೂನಿಂದ 1600 ರೂ ಇದ್ದ ಟಿಕೆಟ್ ದರ ಈಗ 3500 ರಿಂದ 6000 ರೂ ಗೆ ಏರಿಕೆಯಾಗಿದೆ. ಖಾಸಗಿ ಬಸ್ ಗಳ ಸುಲಿಗೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular