ಮುಂಬೈ: ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ವ್ಯತ್ಯಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಅಲ್ವರು ವಿಮಾನ ಕಾರ್ಯಾಚರಣೆ ಇನ್ಸ್ ಪೆಕ್ಟರ್ ಗಳನ್ನು ಅಮಾನತುಗೊಳಿಸಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಆದೇಶ ಹೊರಡಿಸಿದೆ.
ಇಂಡಿಗೋ ವಿಮಾನಗಳು ದಿಢೀರ್ ವ್ಯತ್ಯಯವುಂಟಾದ ಕಾರಣ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಜಿಸಿಎ ನಾಲ್ವರು ವಿಮಾನ ನಿರ್ವಹಣಾ ಇನ್ಸ್ ಪೆಕ್ಟರ್ ಗಳನ್ನು ಅಮಾನತುಗೊಳಿಸಿದೆ.
ಇನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 50 ಇಂಡಿಗೋ ವಿಮಾನಗಳು ಇಂದು ಕೂಡ ರದ್ದಾಗಿವೆ ಎಂದು ತಿಳಿದುಬಂದಿದೆ
