HomeLatest NewsBIG NEWS: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರಿ ಅನಾಹುತ

BIG NEWS: ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ನಾಗ್ಪುರ: ಕೋಲ್ಕತ್ತಾಗೆ ಹೊರಟಿದ್ದ ಇಂದಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ. ವಿಮಾನ ನಾಗ್ಪುರಕ್ಕೆ ವಾಪಸ್ ಆಗಿದೆ.

160-165 ಪ್ರಯಾಣಿಕರಿದ್ದ 6E 812 ಇಂಡಿಗೋ ವಿಮಾನ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿತ್ತು. ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಮುಂಜಾಗೃತಾ ಕ್ರಮವಾಗಿ ಪೈಲಟ್ ವಿಮಾನವನ್ನು ನಾಗ್ಪುರಕ್ಕೆ ವಾಪಸ್ ತಂಡು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.

ಅಲ್ಲದೇ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular