HomeIndiaBIG NEWS: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

BIG NEWS: ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ರಾಯ್ ಪುರ: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ರಾಯ್ಪುರ ವಿಮಾನ ನಿಲ್ದಾಣದಲ್ಲಿ ನಡೆದಿದೆ.

187 ಪ್ರಯಾಣಿಕರು ಹಾಗೂ 6 ಸಿಬ್ಬಂದಿಗಳನ್ನು ಹೊತ್ತು ಸಾಗಿದ್ದ ಇಂಡಿಗೋ ವಿಮಾನ ನಾಗ್ಪುರದಿಂದ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಹೊರಟಿತ್ತು. ಬಾಂಬ್ ಬೆದರಿಕೆ ಸಂದೇಶ ಬಂದ ಕಾರಣ ವಿಮಾನ ಮಾರ್ಗ ಬದಲಾಯಿಸಲಾಯಿತು. ಬಳಿಕ ರಾಯ್ಪುರ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಯಿತು.

ತಾಂತ್ರಿಕ ಹಾಗೂ ಬಾಂಬ್ ನಿಷ್ಕ್ರಿಯ ದಳ, ಪೊಲೀಸರು ವಿಮಾನವನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular