ನವದೆಹಲಿ: ದೆಹಲಿಯಿಂದ ನಾಗಾಲ್ಯಾಂಡ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ದೆಹಲಿಯಿಂದ ನಾಗಾಲ್ಯಾಂಡ್ ನ ದಿಮಾಪುರಕ್ಕೆ ಇಂಡಿಗೋ ವಿಮಾನ ಹೊರಟಿತ್ತು. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ವಿಮಾನದ ಸೀಟ್ ಬ್ಯಾಕ್ ನಲ್ಲಿ ಇಟ್ಟಿದ್ದ ಪವರ್ ಬ್ಯಾಂಕ್ ಗೆ ಬೆಂಕಿ ಬಿದ್ದಿದೆ. ತಕ್ಷಣ ಎಚ್ಚೆತ್ತ ಕ್ಯಾಬಿನ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಸದ್ಯ ಅನಾಹುತವೊಂದು ತಪ್ಪಿದಂತಾಗಿದೆ. ಪ್ರಯಾಣಿಕರು ಹಾಗೂ ವಿಮಾನ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆ ತಿಳಿಸಿದೆ.