ಚೆನ್ನೈ: ಮಧುರೈನಿಂದ ಚೆನ್ನೈಗೆ 76 ಪ್ರಯಾಣಿಕರನ್ನು ಕರೆತಂದಿದ್ದ ಇಂಡಿಗೋ ವಿಮಾನದ ಲ್ಯಾಂಡಿಂಗ್ ವೇಳೆ ವಿಂಡ್ ಶೀಲ್ಡ್ ನಲ್ಲಿ ಬಿರುಕು ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಲ್ಯಾಂಡಿಂಗ್ ವೇಳೆ ಮುಂಭಾಗದ ಗಾಜಿನಲ್ಲಿ ಬಿರುಕು ಕಾಣಿಸಿಕೊಂಡಿರುವುದನ್ನು ಪೈಲಟ್ ಗಮನಿಸಿದ್ದಾರೆ. ತಕ್ಷಣ ವಿಮಾನ ನಿಲ್ದಾಣದ ವಾಯು ಸಂಚಾರ ನಿಯಂತ್ರಕರಿಗೆ ಮಾಹಿತಿ ನೀಡಿದ್ದಾರೆ. ಅಗತ್ಯ ವ್ಯವಸ್ಥೆಗಳನ್ನು ಮಾಡಿ ತಕ್ಷಣ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು.
ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಪಾರ್ಕಿಂಗ್ ಮಾಡಿ ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು. ಸದ್ಯ ವಿಮಾನದ ವಿಂಡ್ ಶೀಲ್ಡ್ ಬದಲಾಯಿಸಲು ವ್ಯವಸ್ಥೆ ಮಾಡಲಾಗಿದೆ. ಘಟನೆಯಿಂದಾಗಿ ಮಧುರೈ ವಿಮಾನದ ಮರು ಸಂಚಾರ ತಾಅತ್ಕಾಲಿಕ ರದ್ದಾಗಿದೆ.