BIG NEWS: ಇಂಡಿಗೋ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ; ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಇಂಡಿಗೋ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನಿಸಿದ್ದ ಪ್ರಯಾಣಿಕನನ್ನು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್, ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರು ಮಾರ್ಗವಾಗಿ ಬ್ಯಾಂಕ್ ಕಾಕ್ ಗೆ ತೆರಳುತ್ತಿದ್ದ. 6E6803 ಇಂಡಿಗೋ ವಿಮಾನದಲ್ಲಿ ಸೀಟ್ ನಂಬರ್ 5E ನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ.

ಬೆಂಗಳೂರಿನ ಕೆಐಎ ಏರ್ ಪೋರ್ಟ್ ನಲ್ಲಿ ವಿಮಾನ ಟೇಕ್ ಆಫ್ ಆಗುತ್ತಿದ್ದಾಗ ಸ್ವಪ್ನೋಲ್ ತನ್ನ ಸೀಟ್ ಬಳಿ ಇದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನಿಸಿದ್ದಾನೆ. ಇದನ್ನು ಕಂಡ ಸಿಬ್ಬಂದಿ ಆತನನ್ನು ತಡೆದಿದ್ದಾರೆ.

ಘಟನೆ ಬಳಿಕ ವಿಮಾನವನ್ನು ಮತ್ತೆ ಲ್ಯಾಂಡ್ ಮಾಡಲಾಗಿದ್ದು, ವಿಮಾನ ಸಿಬ್ಬಂದಿಗಳು ಸ್ವಪ್ನೋಲ್ ಹೋಲೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಸ್ವಪ್ನೋಲ್ ವಿರುದ್ಧ ಐಪಿಸಿ ಸೆಕ್ಷನ್ 336 ಅಡಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read