HomeKarnatakaಸಿಎಂ ಡಿ.ಕೆ.ಶಿವಕುಮಾರ್ ಅವರಿಂದಾಗಿ ತಡವಾಗಿ ಹಾರಾಟ ನಡೆಸಿತೇ ಇಂಡಿಗೋ ವಿಮಾನ? ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಯ್ತು ಭಾರಿ...

ಸಿಎಂ ಡಿ.ಕೆ.ಶಿವಕುಮಾರ್ ಅವರಿಂದಾಗಿ ತಡವಾಗಿ ಹಾರಾಟ ನಡೆಸಿತೇ ಇಂಡಿಗೋ ವಿಮಾನ? ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಯ್ತು ಭಾರಿ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗಾಗಿ ಇಂಡಿಗೋ ವಿಮಾನ ವಿಳಂಬವಾಗಿ ಹೊರಡಬೇಕಾದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ನವದೆಹಲಿಗೆ ಹೊರಡಬೇಕಿದ್ದ ಇಂಡಿಗೋ 6E 870 ವಿಮಾನ ಮಂಗಳವಾರದಂದು ವಿಳಂಬವಾಗಿದ್ದು, ಇದಕ್ಕೆ “ವಿವಿಐಪಿ ಸಂಸ್ಕೃತಿ” ಕಾರಣ ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ.

ಪ್ರಯಾಣಿಕ ಸುಪರ್ಣಾ ಸಿಂಗ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ಡಿ.ಕೆ. ಶಿವಕುಮಾರ್ ಅವರು ಬರುವವರೆಗೂ ವಿಮಾನವನ್ನು ರನ್‌ವೇಯಲ್ಲಿ ಸುಮಾರು ಒಂದು ಗಂಟೆ ಕಾಲ ಕಾಯುವಂತೆ ಮಾಡಲಾಗಿತ್ತು. ವಿಮಾನದ ಸಿಬ್ಬಂದಿಯೊಬ್ಬರು ಈ ವಿಳಂಬಕ್ಕೆ ಅವರೇ ಕಾರಣ ಎಂದು ಖಚಿತಪಡಿಸಿದರು, ಆದರೆ ಪೈಲಟ್ ಯಾವುದೇ ನಿಖರ ಕಾರಣ ನೀಡಲಿಲ್ಲ ಎಂದು ಅವರು ಬರೆದುಕೊಂಡಿದ್ದಾರೆ.

ಮಂಗಳವಾರ ರಾತ್ರಿ 7:30 ಕ್ಕೆ ಹೊರಡಬೇಕಿದ್ದ ವಿಮಾನವು, ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್‌ಗಳ ಪ್ರಕಾರ ಸುಮಾರು 36 ನಿಮಿಷ ತಡವಾಗಿ ಅಂದರೆ ರಾತ್ರಿ 8:06 ಕ್ಕೆ ಟೇಕ್-ಆಫ್ ಆಗಿದೆ. ಡಿ.ಕೆ. ಶಿವಕುಮಾರ್ ಅವರು ಅದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಬೇಕಿತ್ತು ಎಂಬುದು ವರದಿಯಾಗಿದೆ.

ಡಿ.ಕೆ.ಶಿವಕುಮಾರ್ ಅವರಿಂದಾಗಿ ವಿಮಾನ ಹಾರಾಟ ವಿಳಂಬ ಎಂಬ ಆರೋಪವನ್ನು ತಳ್ಳಿಹಾಕಿರುವ ಇಂಡಿಗೋ ಏರ್‌ಲೈನ್ಸ್, ವಿಮಾನ ವಿಳಂಬಕ್ಕೆ ಯಾವುದೇ ವಿವಿಐಪಿ ಕಾರಣ ಇರಲಿಲ್ಲ, ಬದಲಿಗೆ “ಕಾರ್ಯಾಚರಣೆಯ ಕಾರಣಗಳಿಂದ” (Operational Reasons) ವಿಮಾನ ತಡವಾಗಿದೆ ಎಂದು ಸ್ಪಷ್ಟನೆ ನೀಡಿದೆ.

ವಿಮಾನ ವಿಳಂಬವಾಗಿರುವುದು ನಿಜವಾದರೂ ಅದು ಡಿ.ಕೆ. ಶಿವಕುಮಾರ್ ಅವರ ಆಗಮನದಿಂದಲೇ ಆಗಿದೆ ಎಂಬುದನ್ನು ಏರ್ ಲೈನ್ಸ್ ತಳ್ಲಿಹಾಕಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯ ಪ್ರಯಾಣಿಕರನ್ನು ಕಾಯಿಸಿ ರಾಜಕಾರಣಿಗಳಿಗೆ ಆದ್ಯತೆ ನೀಡುವ ಈ “ವಿವಿಐಪಿ ಸಂಸ್ಕೃತಿ” ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಟಿಂಗ್ ಆಪರೇಷನ್ ಬಗ್ಗೆ ಮತ್ತಷ್ಟು ಮಾಹಿತಿ ನೀಡಿದ ಸಿಎಂ

ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸಚಿವರ ಮೇಲೆ ಗುಪ್ತ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ನೀಡಿರುವ ಎಚ್ಚರಿಕೆ ಬಗ್ಗೆ ಕೇಳಿದಾಗ, “ಮಾರುವೇಷದ ಕಾರ್ಯಾಚರಣೆಗಳನ್ನು ನನ್ನ ಮೇಲಿಂದಲೇ ಶುರು ಮಾಡಲು ಪ್ರಯತ್ನ ಮಾಡಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲ ಸಾಕ್ಷ್ಯಗಳೂ ಇವೆ. ನಾನು ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಏನೇ ಮಾತನಾಡಬೇಕಾದರೂ ಸುಮ್ಮನೆ ಮಾತನಾಡುವುದಿಲ್ಲ” ಎಂದರು.

ಈ ಕಾರ್ಯಾಚರಣೆ ಸಿಎಂ ಆಗುವ ಮುನ್ನವೇ ಅಥವಾ ಸಿಎಂ ಆದ ಬಳಿಕ ನಡೆದಿದೆಯೇ ಎಂದು ಕೇಳಿದಾಗ, “ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಪ್ರಯತ್ನಗಳ ಬಗ್ಗೆ ಹೇಳುತ್ತಿದ್ದೇನೆ. ನನ್ನನ್ನು ಸೇರಿಸಿ ಬೇರೆ ಯಾವ, ಯಾವ ನಾಯಕರ ವಿರುದ್ಧ ಕಾರ್ಯಾಚರಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದೂ ತಿಳಿದಿದೆ. ಆದರೆ, ಈ ಎಲ್ಲ ವಿಚಾರಗಳನ್ನು ಈಗ ಬಹಿರಂಗವಾಗಿ ಮಾತನಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ತಮ್ಮ ವಿರುದ್ಧದ ಪ್ರಯತ್ನಗಳ ಹಿಂದೆ ಕರ್ನಾಟಕದವರೇ ಇದ್ದಾರೆಯೇ ಅಥವಾ ಬೇರೆ ರಾಜ್ಯದವರೂ ಇದ್ದಾರೆಯೇ ಎಂಬ ಬಗ್ಗೆ ಕೇಳಲಾಗಿ, “ನಾನು ನಿಮ್ಮ ಬಳಿ ಎಲ್ಲವನ್ನೂ ಬಹಿರಂಗಪಡಿಸಲು ಹೋಗುವುದಿಲ್ಲ. ಕಾಲ ಬಂದಾಗ ಉತ್ತರ ಕೊಡುತ್ತೇನೆ” ಎಂದು ಹೇಳಿದರು.

ಸಚಿವರನ್ನು ಸಿಕ್ಕಿ ಹಾಕಿಸಲು ಏಜೆಂಟರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಬಹಳ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಕೆಲವರು ನನ್ನ ಬಳಿ ಬಂದಿದ್ದರು, ನಾನು ಫೋಟೋಗಳನ್ನು ಬಿಡುಗಡೆ ಮಾಡಲು ಸಿದ್ಧ. ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತು. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ನನ್ನ ಬಳಿ ಯಾರು ಬಂದಿದ್ದರೋ ಅವರ ಮೇಲೆ ಅನುಮಾನ ಬಂದು ಪೊಲೀಸರಿಗೆ ತಿಳಿಸಿ, ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ. ಅದನ್ನು ಈಗಲೇ ಬಹಿರಂಗ ಮಾಡಲು ಸಾಧ್ಯವಿಲ್ಲ. ಇದಕ್ಕೆ ಪಿತಾಮಹರು ಯಾರು ಎಂದು ತಿಳಿದಿದೆ. ಅದಕ್ಕೆಲ್ಲಾ ಉತ್ತರಿಸಲು ಹೋಗುವುದಿಲ್ಲ. ಅಧಿಕಾರಿಗಳನ್ನು ಸುಮ್ಮನೆ ಸಿಕ್ಕಿಹಾಕಿಸಲು ಪ್ರಯತ್ನ ಮಾಡುತ್ತಿದ್ದು, ಅವರು ಹುಷಾರಾಗಿರಬೇಕು ಎಂದು ಎಚ್ಚರಿಕೆ ನೀಡಿದೆ. ಹಿಂದೆ ಮಾಧ್ಯಮದಿಂದ ಸ್ಟಿಂಗ್ ಆಪರೇಷನ್ ಮಾಡಲು ಬಂದಿದ್ದರು. ಹಾಗಾಗಿ ಈಗಲೇ ಎಚ್ಚರಿಕೆ ನೀಡಲಾಗಿದೆ. ಕೆಲವು ನಾಯಕರು ಈ ಕಾರ್ಯಾಚರಣೆಗೆ ಖಾಸಗಿ ಏಜೆಂಟರನ್ನು ನೇಮಕ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಪಕ್ಕಾ ಮಾಹಿತಿ ಇದೆ” ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular