ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಪೂರೈಕೆ ಮಾಡುವವರ ದರ ಹೆಚ್ಚಳ ಮಾಡಲಾಗಿದೆ.
ಆಹಾರ ಪೂರೈಸುವವರಿಗೆ ಸರ್ಕಾರ ನೀಡುವ ದರ 5 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಿಎಂ ಸಿದ್ಧರಾಮಯ್ಯ, ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟನೆ ನೀಡಿ, ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಆಹಾರ ಪೂರೈಕೆ ಮಾಡುವವರಿಗೆ ಈ ಹಿಂದೆ 57 ರೂ. ನೀಡಲಾಗುತ್ತಿತ್ತು. ಅದನ್ನು 62 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಮೆನು ಬದಲಾವಣೆ ಮಾಡಿದ್ದರಿಂದ ಆಹಾರ ಪೂರೈಸುವವರಿಗೆ ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರಿಗೆ ಊಟದ ದರ ಹೆಚ್ಚಳ ಮಾಡಿಲ್ಲ ಎಂದು ಹೇಳಲಾಗಿದೆ.
ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್ಗಳನ್ನು 27 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ.
– ಮುಖ್ಯಮಂತ್ರಿ… pic.twitter.com/NdSSfCYDd3— CM of Karnataka (@CMofKarnataka) August 19, 2023


