HomeLatest NewsBIG NEWS: ಇಂದಿರಾ ಕ್ಯಾಂಟೀನ್ ಗಳಲ್ಲಿ ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಿಎಂ...

BIG NEWS: ಇಂದಿರಾ ಕ್ಯಾಂಟೀನ್ ಗಳಲ್ಲಿ ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಿ: ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳು ಕಾರ್ಯಾರಂಭ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಕ್ಯಾಂಟೀನ್ ಗಳಿಗೆ ಇನ್ನೂ 5 ಕಡೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು. ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular