HomeCrimeSHOCKING NEWS: ಶೋರೂಂ ಬಟ್ಟೆ ಬದಲಾಯಿಸೋ ಕೋಣೆಯಲ್ಲಿ ಅತ್ಯಾಚಾರ; ನ್ಯಾಯಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಮಹಿಳೆ

SHOCKING NEWS: ಶೋರೂಂ ಬಟ್ಟೆ ಬದಲಾಯಿಸೋ ಕೋಣೆಯಲ್ಲಿ ಅತ್ಯಾಚಾರ; ನ್ಯಾಯಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಮಹಿಳೆ

ಮಾಲ್​​ನ ಶೂರೂಂನಲ್ಲಿರುವ ಬಟ್ಟೆ ಬದಲಾಯಿಸುವ ಕೋಣೆಯಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆಯು ಇಂದೋರ್​ನ ಟಿಐ ಮಾಲ್​​ನಲ್ಲಿ ಸಂಭವಿಸಿದೆ. ಆರೋಪಿಯು ತಾನು ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದ್ದು, ಇದಾದ ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಹಿಳೆಯು ಆರೋಪಿಸಿದ್ದಾರೆ.

ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ, ತುಕೋಗಂಜ್​ ಪೊಲೀಸ್​ ಠಾಣೆಯ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮಹಿಳೆ ಹಾಗೂ ಆರೋಪಿ ಚಿನ್ಮಯ್​​​ ಒಂದೇ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಎರಡು ವರ್ಷಗಳ ಹಿಂದೆ ಆರೋಪಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಇದರಿಂದ ಮಹಿಳೆಯು ಸ್ನೇಹ ಬೆಳೆಸಿದ್ದಳು. ಕೆಲವು ದಿನಗಳ ಹಿಂದೆ ಶೋರೂಂನ ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಇದಾದ ಬಳಿಕ ಯುವಕ ಮದುವೆಯಾಗಲು ನಿರಾಕರಿಸಿದ್ದ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಈ ವಿಚಾರವನ್ನು ಬಾಯ್ಬಿಟ್ಟರೆ ಗಂಭೀರ ಪರಿಣಾಮ ಎದುರಿಸಬೇಕಾಗಿ ಬರಬಹುದು ಎಂದು ಆರೋಪಿಯು ಸಂತ್ರಸ್ತೆಯನ್ನು ಹೆದರಿಸಿದ್ದ ಎನ್ನಲಾಗಿದೆ. ಆರೋಪಿ ವಿರುದ್ಧ ಪೊಲೀಸರು ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಭಾನುವಾರ ಬಂದಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಇಲ್ಲಿಂದ ನೇರವಾಗಿ ಜೈಲಿಗೆ ಕಳುಹಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular