ʼಮಾವಿನಹಣ್ಣುʼ ತಿಂದ ಬಳಿಕ ನಿಗೂಢವಾಗಿ ಸಾವನ್ನಪ್ಪಿದ ಮಹಿಳೆ…..!

ಮಾವು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಮಹಿಳೆ ಚಿಕಿತ್ಸೆ ವೇಳೆ ಸಾವನ್ನಪ್ಪಿರೋ ಘಟನೆ ಮಧ್ಯಪ್ರದೇಶದಲ್ಲಿ ಆತಂಕ ಉಂಟುಮಾಡಿದೆ. ರಾಜೇಂದ್ರನಗರ ಪ್ರದೇಶದಲ್ಲಿ 23 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಮಾವಿನಹಣ್ಣನ್ನು ತಿಂದ ನಂತರ ಮಹಿಳೆಯ ಸ್ಥಿತಿ ಹದಗೆಟ್ಟಿತು ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.

ಮೃತರನ್ನು ನಗರದ ಬಿಜಾಲ್‌ಪುರ ನಿವಾಸಿ ಅರ್ಚನಾ ಅಲೆರಿಯಾ ಎಂದು ಗುರುತಿಸಲಾಗಿದೆ. ಜುಲೈ 8 ರಂದು ಆಸ್ಪತ್ರೆಗೆ ದಾಖಲಾಗಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಮಧ್ಯಾಹ್ನದ ಊಟದ ನಂತರ ಮಾವಿನ ಹಣ್ಣನ್ನು ತಿಂದ ನಂತರ ಆಕೆಯ ಸ್ಥಿತಿ ಹದಗೆಟ್ಟಿತು. ಆರೋಗ್ಯ ಹದಗೆಟ್ಟ ನಂತರ ಕ್ಲಿನಿಕ್‌ಗೆ ಕರೆದೊಯ್ಯಲಾಯಿತು. ಈ ವೇಳೆ ವೈದ್ಯರು ಕೆಲವು ಔಷಧಿಗಳನ್ನು ಬರೆದುಕೊಟ್ಟರು.

ಆದರೆ ಸ್ವಲ್ಪ ಸಮಯದ ನಂತರ ಆಕೆ ತಲೆತಿರುಗುತ್ತಿದೆ ಎಂದು ಹೇಳಿದ ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದಳು ಎಂದು ಮೃತಳ ಮಾವ ಬನ್ಸಿಲಾಲ್ ಅಲೇರಿಯಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಿಷಕಾರಿ ಮಾವಿನ ಹಣ್ಣು ತಿಂದಿರುವ ಕಾರಣದಿಂದಾಗಿ ಆಕೆಯ ಆರೋಗ್ಯ ಹದಗೆಟ್ಟು ಸಾವನ್ನಪ್ಪಿದ್ದಾಳೆಂದು ಕುಟುಂಬಸ್ಥರು ಶಂಕಿಸಿದ್ದಾರೆ. ಆದರೆ ಮಹಿಳೆಯ ಸಾವಿನ ಹಿಂದಿನ ನಿಖರವಾದ ಕಾರಣವನ್ನು ತಿಳಿಯಲು ಶವಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ ಎಂದು ರಾಜೇಂದ್ರ ನಗರ ಪೊಲೀಸ್ ಠಾಣೆಯ ತನಿಖಾಧಿಕಾರಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read