HomeLatest Newsಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವು, ಪ್ರಕರಣ ದಾಖಲು

ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವು, ಪ್ರಕರಣ ದಾಖಲು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆ ಶಿಶು ಮೃತಪಟ್ಟ ಬಗ್ಗೆ ಸಂಶಯ ಉಂಟಾಗಿದ್ದು, ಮಗುವಿನ ತಂದೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಮಿಲನ್ ಅವರ ಪತ್ನಿ ಗರ್ಭಿಣಿ ಚೈತ್ರಾ ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯರ ಮಾರ್ಗದರ್ಶನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜನವರಿ 15ರಂದು ಹೆರಿಗೆ ದಿನಾಂಕ ನಿಗದಿಪಡಿಸಿದ್ದ ವೈದ್ಯರು, ಜನವರಿ 13ರಂದು ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದ್ದರು.

ಅಂತೆಯೇ ಆಸ್ಪತ್ರೆಗೆ ಬಂದಿದ್ದ ಚೈತ್ರಾ ಅವರನ್ನು ಪರೀಕ್ಷಿಸಿದ ವೈದ್ಯರು ಎಲ್ಲವೂ ನಾರ್ಮಲ್ ಇದೆ ಎಂದು ಹೇಳಿ ಹೆರಿಗೆ ನೋವಿಗೆ ಚುಚ್ಚುಮದ್ದು ನೀಡಿದ್ದಾರೆ. ನಂತರ ಹೆರಿಗೆ ಕೋಣೆಗೆ ಅವರನ್ನು ಕರೆದುಕೊಂಡು ಹೋಗಿದ್ದು, ನಾರ್ಮಲ್ ಹೆರಿಗೆಯಾಗದ ಕಾರಣ ಸಿಸೇರಿಯನ್ ಮೂಲಕ ಮಗುವನ್ನು ಹೊರ ತೆಗೆಯಲಾಗಿದೆ. ಈ ವೇಳೆ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮಿಲನ್ ದೂರು ನೀಡಿದ್ದಾರೆ. ಪುತ್ರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಿಶುವಿನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular